ಧೈರ್ಯವಿದ್ದರೆ ಕಾಂಗ್ರೆಸ್‌ಗೆ ಹೋಗಿ, ಬೆನ್ನಿಗೆ ಇರಿಯಬೇಡಿ: ಅಡ್ಡ ಮತದಾನ ಮಾಡಿದ ಶಾಸಕರಿಗೆ ಹೆಚ್.ಡಿ. ಕುಮಾರಸ್ವಾಮಿ ನೇರ ಎಚ್ಚರಿಕೆ!



(ನ್ಯೂಸ್‌ ಕಡಬ) newskadaba.com,ಜೂ.20 ಬೆಂಗಳೂರು: ಪರಿಷತ್ ಚುನಾವಣೆಯಲ್ಲಿ ಪಕ್ಷದ ನಿಯಮ ಮೀರಿ ಅಡ್ಡ ಮತದಾನ ಮಾಡಿದ ಸ್ವಪಕ್ಷೀಯ ಶಾಸಕರ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ತಮ್ಮ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ನಮ್ಮ ಪಕ್ಷದಲ್ಲಿ ಭವಿಷ್ಯವಿಲ್ಲ ಎಂದು ಅನಿಸಿದರೆ ಧೈರ್ಯವಾಗಿ ಕಾಂಗ್ರೆಸ್‌ಗೆ ಹೋಗಿ, ಆದರೆ ಈ ರೀತಿ ಬೆನ್ನಿಗೆ ಇರಿಯುವ ಕೆಲಸ ಮಾಡಬೇಡಿ” ಎಂದು ನೇರ ಎಚ್ಚರಿಕೆ ನೀಡಿದ್ದಾರೆ.







ಅಡ್ಡ ಮತದಾನ ಮಾಡಿದವರನ್ನು ಪತ್ತೆ ಹಚ್ಚಲು ಬಿಜೆಪಿ ಈಗಾಗಲೇ ಸಿ.ಟಿ. ರವಿ ಅವರ ನೇತೃತ್ವದಲ್ಲಿ ಮೂರು ಸದಸ್ಯರ ತಂಡವನ್ನು ರಚಿಸಿದೆ. ಶಾಸಕರು ಅಂತಿಮ ನಿರ್ಧಾರದ ಜವಾಬ್ದಾರಿಯನ್ನು ತಮಗೆ ವಹಿಸಿದ್ದು, ಸದ್ಯಕ್ಕೆ ತಮ್ಮ ಸಂಪೂರ್ಣ ಗಮನ 2028ರ ವಿಧಾನಸಭಾ ಚುನಾವಣೆಯ ಮೇಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.






ಮುಖ್ಯಮಂತ್ರಿ ಸ್ಥಾನಕ್ಕಿಂತ ಮೊದಲು ರಾಜ್ಯದಲ್ಲಿರುವ “ಕೆಟ್ಟ ಸರ್ಕಾರ” ತೊಲಗಿ, ಜನತೆಯ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುವ ಜನಪರ ಸರ್ಕಾರ ಅಧಿಕಾರಕ್ಕೆ ಬರುವುದು ಮುಖ್ಯ ಎಂದು ಹೆಚ್‌ಡಿಕೆ ಹೇಳಿದ್ದಾರೆ.

 

error: Content is protected !!
Scroll to Top