ದಕ್ಷಿಣ ಕನ್ನಡದಲ್ಲಿ ನಿಫಾಃ ಪತ್ತೆಯಾಗಿಲ್ಲ: ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ► ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.24. ಕೇರಳ ರಾಜ್ಯವನ್ನೇ ತಲ್ಲಣಗೊಳಿಸಿದ್ದ ನಿಪಾಹ್ ವೈರಸ್ ಕರ್ನಾಟಕಕ್ಕೆ ಕಾಲಿಟ್ಟಿಲ್ಲ. ಕೇವಲ ವದಂತಿ ಮಾತ್ರವಾಗಿದ್ದು, ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಸಸಿಕಾಂತ್‌ ಸೆಂಥಿಲ್‌ ಸ್ಪಷ್ಟಪಡಿಸಿದ್ದಾರೆ.

ಶಂಕಿತ ನಿಪಾಃ ಹಿನ್ನೆಲೆಯಲ್ಲಿ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ ರೋಗಿಗಳಿಬ್ಬರ ವೈದ್ಯಕೀಯ ಪರೀಕ್ಷೆಯ ವರದಿ ಬಂದಿದ್ದು, ಎರಡೂ ಪ್ರಕರಣಗಳಲ್ಲಿ ಋಣಾತ್ಮಕ ಫಲಿತಾಂಶ ಕಂಡುಬಂದಿದೆ. ಆದುದರಿಂದ ಯಾರೂ ಈ ಬಗ್ಗೆ ಭಯಪಡುವ ಅಗತ್ಯವಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಸುಳ್ಳು ಸುದ್ದಿಗಳನ್ನು ಯಾರೂ ನಂಬಬಾರದೆಂದು ಸೆಂಥಿಲ್‌ ತಿಳಿಸಿದ್ದಾರೆ.

Also Read  ರಿವರ್ಸ್ ತೆಗೆಯುವ ವೇಳೆ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಕಾರು..!

error: Content is protected !!
Scroll to Top