(ನ್ಯೂಸ್ ಕಡಬ) newskadaba.com, ಜೂ.25 ರಾಜರಾಜೇಶ್ವರಿ ನಗರದ ಎಲಿಗೇಟ್ ಅಪಾರ್ಟ್‌ಮೆಂಟ್‌ನಲ್ಲಿರುವ ಕನ್ನಡ ನಟಿ ಕೃಷಿ ತಾಪಂಡ ಅವರ ಫ್ಲಾಟ್‌ನಲ್ಲಿ ಅವರ ಸ್ನೇಹಿತ ಹಾಗೂ ಆಟೋಮೊಬೈಲ್ ಉದ್ಯಮಿ ವೈಶಾಕ್ ಗುರುವಾರ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಯುವ ಮುನ್ನ ವೈಶಾಕ್ ನಟಿಗೆ ಸಂದೇಶ ಕಳುಹಿಸಿದ್ದರು ಎನ್ನಲಾಗಿದೆ.
ಪತಿಯ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ವೈಶಾಕ್ ಪತ್ನಿ ಮೇಘನಾ ಅವರು ಆರ್‌ಆರ್ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ನಟಿ ಕೃಷಿ ತಾಪಂಡ ಜೊತೆ ತನ್ನ ಪತಿ ಅಕ್ರಮ ಸಂಬಂಧ ಹೊಂದಿದ್ದರು ಎಂದು ದೂರಿನಲ್ಲಿ ಆರೋಪಿಸಿದ್ದಾರೆ.
ವೈಶಾಕ್ ಮತ್ತು ಅವರ ಪತ್ನಿ ನಡುವೆ ಕೌಟುಂಬಿಕ ಭಿನ್ನಾಭಿಪ್ರಾಯಗಳಿದ್ದವು. ಜಗಳವಾದಾಗಲೆಲ್ಲಾ ಅವರು ನಟಿಯ ಮನೆಗೆ ಬಂದು ಉಳಿದುಕೊಳ್ಳುತ್ತಿದ್ದರು ಎನ್ನಲಾಗಿದೆ.ನಟಿಯ ಮಾಜಿ ಗೆಳೆಯ ಅರವಿಂದ್ ರೆಡ್ಡಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ವೈಶಾಕ್ ಈ ಹಿಂದೆ ಬಂಧನಕ್ಕೊಳಗಾಗಿದ್ದರು. ಇದು ಕೂಡ ಗಂಡ-ಹೆಂಡತಿಯ ನಡುವಿನ ಜಗಳಕ್ಕೆ ಕಾರಣವಾಗಿತ್ತು.ಘಟನಾ ಸ್ಥಳಕ್ಕೆ ಧಾವಿಸಿರುವ ಪೊಲೀಸರು ಪತ್ನಿಯ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ಪತ್ತೆಹಚ್ಚಲು ತನಿಖೆ ಚುರುಕುಗೊಳಿಸಿದ್ದಾರೆ.









