ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಜೂ.01 ರಿಂದ 61 ದಿನಗಳ ಕಾಲ ಮೀನುಗಾರಿಕೆಗೆ ನಿಷೇಧ – News Kadaba

ಜೂ.01 ರಿಂದ 61 ದಿನಗಳ ಕಾಲ ಮೀನುಗಾರಿಕೆಗೆ ನಿಷೇಧ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.24. ಕರ್ನಾಟಕ ಕರಾವಳಿ ಮೀನುಗಾರಿಕೆ (ನಿಯಂತ್ರಣ) ಕಾಯ್ದೆ, 1986 ಕರ್ನಾಟಕ ಸರ್ಕಾರದ ಅಧಿಸೂಚನೆಯ ಅನ್ವಯ ದಕ್ಷಿಣ ಕನ್ನಡ ಜಿಲ್ಲೆಯ ಕರ್ನಾಟಕದ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು / ಸಾಧನಗಳನ್ನು ಉಪಯೋಗಿಸಿ ಎಲ್ಲಾ ಯಾಂತ್ರೀಕೃತ ದೋಣಿಗಳ ಮುಖಾಂತರ ಹಾಗೂ 10 ಅಶ್ವಶಕ್ತಿ ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್‍ಬೋರ್ಡ್ ಅಥವಾ ಔಟ್‍ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ಜೂನ್ 1 ರಿಂದ ಜುಲೈ 31 ರವರೆಗೆ (ಉಭಯ ದಿನಗಳು ಸೇರಿ) ಒಟ್ಟು 61 ದಿನಗಳ ನಿಷೇಧವನ್ನು ಹೇರಿ ಆದೇಶ ಹೊರಡಿಸಿದೆ.

ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿಯೇ 10 ಅಶ್ವಶಕ್ತಿಯವರೆಗಿನ ಸಾಮರ್ಥ್ಯದ ಮೋಟಾರೀಕೃತ ದೋಣಿ ಹಾಗೂ ಸಾಂಪ್ರದಾಯಿಕ / ನಾಡದೋಣಿಗಳು ಕರಾವಳಿ ಮೀನುಗಾರಿಕೆಯನ್ನು ಕೈಗೊಳ್ಳಲು ಅನುಮತಿಸಿದೆ. ಮೀನುಗಾರಿಕೆ ನಿಷೇಧಿಸಿದ ಸರ್ಕಾರದ ಆದೇಶವನ್ನು ಉಲ್ಲಂಘಿಸುವ ಮೀನುಗಾರಿಕಾ ದೋಣಿಗಳು ಮತ್ತು ಮೀನುಗಾರರು ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ-1986ರಲ್ಲಿ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆಯಾಗುವುದಲ್ಲದೇ ಒಂದು ವರ್ಷದ ಅವಧಿಗೆ ಡೀಸೆಲ್ ಮೇಲಿನ ಸಹಾಯಧನ ಪಡೆಯಲು ಅನರ್ಹರಾಗುತ್ತಾರೆ. ಕರಾವಳಿ ಪ್ರದೇಶದ ಎಲ್ಲಾ ಮೀನುಗಾರರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಹೊರಡಿಸಿರುವುದರಿಂದ ಎಲ್ಲಾ ಮೀನುಗಾರರು ಈ ಆದೇಶವನ್ನು ಪಾಲಿಸಿ ಸಹಕರಿಸುವಂತೆ ಪ್ರಕಟಣೆ ತಿಳಿಸಿದೆ.

Scroll to Top