(ನ್ಯೂಸ್ ಕಡಬ) newskadaba.com ಜೂ. 27. ತಿಮಿಂಗಿಲ ವಾಂತಿಯನ್ನು ಅಕ್ರಮವಾಗಿ ಮಾರಾಟ ಮಾಡಲೆತ್ನಿಸುತ್ತಿದ್ದ ಸಂದರ್ಭ ವಿಟ್ಲ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ನಡೆದಿದೆ.
ಬಂಧಿತರನ್ನು ಕರೋಪಾಡಿ ನಿವಾಸಿ ಕುಮುದಾಕ್ಷ (27) ಹಾಗೂ ವಿಟ್ಲ ಕಸಬಾ ನಿವಾಸಿ ಧನು ಕುಮಾರ್ (32) ಎಂದು ಗುರುತಿಸಲಾಗಿದೆ.
ತಿಮಿಂಗಿಲ ವಾಂತಿಯನ್ನು ಮಾರಾಟ ಮಾಡಲು ದ್ವಿಚಕ್ರ ವಾಹನದಲ್ಲಿ ಸಾಗಿಸುತ್ತಿರುವುದಾಗಿ ಮಾಹಿತಿ ಬಂದ ಮೇರೆಗೆ ವಿಟ್ಲ ಠಾಣೆಯ ಎಸೈ ರಾಮಕೃಷ್ಣ ಅವರು ಸಿಬ್ಬಂದಿಗಳೊಂದಿಗೆ ವಿಟ್ಲ ಕಸಬಾ ಗ್ರಾಮದ ಬೋಳಂತಿಮೊಗರು ಎಂಬಲ್ಲಿ ಸ್ಕೂಟರ್ ತಡೆದು ನಿಲ್ಲಿಸಿ ವಿಚಾರಣೆ ನಡೆಸಿದ್ದಾರೆ. ಈ ಸಂದರ್ಭ ಆರೋಪಿಗಳು ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 5.73 ಗ್ರಾಂ ತೂಕದ ವಸ್ತುವನ್ನು ಪರಿಶೀಲಿಸಿ ಇದು ತಿಮಿಂಗಿಲ ವಾಂತಿ ಎಂಬುದಾಗಿ ಪತ್ತೆಹಚ್ಚಿದ್ದಾರೆ.
ಬಳಿಕ ಆರೋಪಿಗಳ ಜೊತೆಗೆ ಅವರ ಬಳಿಯಿದ್ದ 2 ಮೊಬೈಲ್ ಫೋನ್ ಹಾಗೂ ದ್ವಿಚಕ್ರ ವಾಹನವನ್ನು ಸ್ವಾಧೀನಪಡಿಸಿಕೊಂಡು ಆರೋಪಿಗಳ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ: 140/2026, ಕಲಂ:
ಕಲಂ: 51 THE WILD LIFE (PROTECTION) ACT, 1972, ಕಲಂ: 3(5) BNS 2023 ರಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.









