(ನ್ಯೂಸ್ ಕಡಬ) newskadaba.com ಜೂ. 27. ಪರಿಶಿಷ್ಟ ಜಾತಿ/ಪಂಗಡದ ಕಲ್ಯಾಣ ಇಲಾಖೆಯಿಂದ ಪ.ಜಾತಿ/ಪ.ವರ್ಗದ ವಿದ್ಯಾರ್ಥಿಗಳಿಗೆ 2026-27ನೇ ಸಾಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಮಂಜೂರಾತಿಗಾಗಿ, ವೆಬ್‍ಸೈಟ್ http://ssp.postmatric.karnataka.gov.in ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಅರ್ಹತೆಗಳು: ಮಾನ್ಯತೆ ಪಡೆದ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪ.ಜಾತಿ/ಪ.ಪಂಗಡದ ವಿದ್ಯಾರ್ಥಿಗಳಾಗಿರಬೇಕು. ವಿದ್ಯಾರ್ಥಿಯ ಪೋಷಕರ ಕುಟುಂಬದ ಆದಾಯ ಮಿತಿ ವಾರ್ಷಿಕ ರೂ.2.50 ಲಕ್ಷಗಳ ಮಿತಿಯೊಳಗೆ ಇರಬೇಕು. ವಿದ್ಯಾರ್ಥಿಯ ಮುಂದಿನ ತರಗತಿಗೆ ಪ್ರವೇಶ ಪಡೆಯಲು ಅರ್ಹತೆ ಹೊಂದಿರಬೇಕು. 2025-26ನೇ ಸಾಲಿನಿಂದ ಮ್ಯಾನೇಜ್ ಮೆಂಟ್ ಸೀಟಿನ ವಿದ್ಯಾರ್ಥಿಗಳು ಕೂಡಾ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ವಿಧಾನಗಳು: http://ssp.postmatric.karnataka.gov.in ನಲ್ಲಿ POST METRIC
SCHOLARSHIP 2026-27ರಲ್ಲಿ ಹೊಸ ವಿದ್ಯಾರ್ಥಿಗಳು ಖಾತೆಯನ್ನು ಸೃಜಿಸಿ (CREATE ACCOUNT) ಅರ್ಜಿ ಸಲ್ಲಿಸಬೇಕು ಹಾಗೂ ನವೀಕರಣ ವಿದ್ಯಾರ್ಥಿಗಳು ವಿದ್ಯಾರ್ಥಿ ಲಾಗಿನ್ (STUDENT LOGIN) ನಲ್ಲಿ ಹಳೆಯ ನೋಂದಣಿ ಸಂಖ್ಯೆ ಹಾಗೂ ಪಾಸ್ ವರ್ಡ್ ಬಳಸಿಕೊಂಡು ಅರ್ಜಿ ಸಲ್ಲಿಸಬೇಕು.
2026-27ನೇ ಸಾಲಿಗೆ ಪ್ರವೇಶಾತಿ ಪಡೆಯುವ ಮೊದಲು ಎಸ್.ಎಸ್.ಪಿ ಲಾಗಿನ್ ಆಗಿ ಮೊದಲನೇ ಹಂತ (1sst step) ದಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರದ ವಿವರಗಳನ್ನು ನಮೂದಿಸಿ “ಫ್ರೀ ಶೀಪ್ ಕಾರ್ಡ್”ಗೆ ಅರ್ಜಿ ಸಲ್ಲಿಸಿ ಕಾರ್ಡ್ ಡೌನ್ಲೋಡ್ ಮಾಡಿಕೊಳ್ಳಬಹುದು.
ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು: ವಿದ್ಯಾರ್ಥಿಗಳ / ಪೋಷಕರ ಆಧಾರ್ ಸಂಖ್ಯೆ ಮತ್ತು ಆಧಾರ್‍ನಲ್ಲಿರುವ ಹಾಗೆ ಇರುವ ಹೆಸರು, ವಿದ್ಯಾರ್ಥಿಗಳ ಮೊಬೈಲ್ ಸಂಖ್ಯೆ, ವಿದ್ಯಾರ್ಥಿಗಳ ಇ-ಮೇಲ್ ಐಡಿ, ವಿದ್ಯಾರ್ಥಿಗಳ ಎಸ್ ಎಸ್ ಎಲ್ ಸಿ ನೋಂದಣಿ ಸಂಖ್ಯೆ, ವಿದ್ಯಾರ್ಥಿಗಳ ಹೆಸರಿನಲ್ಲಿರುವ ಜಾತಿ/ಆದಾಯ ಪ್ರಮಾಣದ ಪತ್ರದ ಆರ್ ಡಿ ಸಂಖ್ಯೆ, ವಿದ್ಯಾರ್ಥಿಯು ವಿಕಲ ಚೇತನರಾಗಿದ್ದಲ್ಲಿ (ಯು.ಡಿ.ಐ.ಡಿ ಗುರುತಿನ ಚೀಟಿ), ವಿದ್ಯಾರ್ಥಿಯು ವಾಸವಿರುವ ಜಿಲ್ಲೆ ತಾಲೂಕು ವಿಧಾನಸಭಾ ಕ್ಷೇತ್ರದ ಹೆಸರು ಮತ್ತು ಮನೆಯ ವಿಳಾಸ, ವಿದ್ಯಾರ್ಥಿಯ ಕಾಲೇಜು ದಾಖಾಲಾತಿ/ನೊಂದಣಿ ಸಂಖ್ಯೆ, ಸಂಬಂಧಪಟ್ಟ ದಾಖಲೆಗಳ ಇ-ದೃಢೀಕರಣ ಸಂಖ್ಯೆ (ಅನ್ವಯವಾದಲ್ಲಿ), ಹಾಸ್ಟೆಲ್ ವಿವರಗಳು ಅನ್ವಯವಾದಲ್ಲಿ, ವಿದ್ಯಾರ್ಥಿಯು ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಲು ಕುಟುಂಬ ತಂತ್ರಾಂಶದಲ್ಲಿ ನೋಂದಣಿಯಾಗಿ ಕುಟುಂಬ ಗುರುತಿನ ಸಂಖ್ಯೆಯನ್ನು ಹೊಂದಿರುವುದು ಕಡ್ಡಾಯವಾಗಿರುತ್ತದೆ.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 9480843114 ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು(ಗ್ರೇಡ್-1) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.









