ಗುಂಡ್ಯ: ಕಾರು ಮತ್ತು ಟ್ಯಾಂಕರ್ ನಡುವೆ ಢಿಕ್ಕಿ- ಐವರಿಗೆ ಗಾಯ

(ನ್ಯೂಸ್ ಕಡಬ) newskadaba.com ಜೂ. 29. ಕಾರು ಹಾಗೂ ಟ್ಯಾಂಕರ್ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಐವರು ಗಾಯಗೊಂಡ ಘಟನೆ ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪದ ಬರ್ಚಿನಹಳ್ಳ ಎಂಬಲ್ಲಿ ನಡೆದಿದೆ.

ಗಾಯಗೊಂಡವರನ್ನು ಸಕಲೇಶಪುರ ನಿವಾಸಿಗಳಾದ ಸಂಜಯ್ (34), ಲಲಿತಾ (45), ಮೋನಪ್ಪ (56), ಪ್ರೇಮಾ (34) ಹಾಗೂ ಸುರೇಶ್ (39) ಎಂದು ಗುರುತಿಸಲಾಗಿದೆ.

ನೆಲ್ಯಾಡಿಯಿಂದ ಸಕಲೇಶಪುರದತ್ತ ತೆರಳುತ್ತಿದ್ದ ಕಾರು, ಗುಂಡ್ಯ ಸಮೀಪದ ಬರ್ಚಿನಹಳ್ಳ ತಲುಪುತ್ತಿದ್ದ ವೇಳೆ ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಟ್ಯಾಂಕರ್ ಲಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಕಾರಿನಲ್ಲಿದ್ದ ಐವರಿಗೆ ಗಾಯಗಳಾಗಿವೆ. ತಕ್ಷಣವೇ ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ನೆಲ್ಯಾಡಿಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಒಳರೋಗಿಗಳಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Scroll to Top