ಬಂಟ್ವಾಳ: ಬಿ.ಸಿ. ರೋಡ್ ಬಳಿ ಕೆಎಸ್‌ಆರ್‌ಟಿಸಿ ಬಸ್ ಚಾಲಕ-ಕಾರು ಚಾಲಕಿ ನಡುವೆ ವಾಗ್ವಾದ; ಪರಸ್ಪರ ದೂರು ದಾಖಲು



(ನ್ಯೂಸ್‌ ಕಡಬ) newskadaba.com, ಬಂಟ್ವಾಳ:  ಬೈಪಾಸ್ ರಸ್ತೆ ಹಾಗೂ ಬಿ.ಸಿ. ರೋಡ್ ಸಮೀಪ ಕೆಎಸ್‌ಆರ್‌ಟಿಸಿ ಬಸ್ ಚಾಲಕ ಮತ್ತು ಕಾರು ಚಾಲಕಿ ನಡುವೆ ನಡೆದ ವಾಗ್ವಾದಕ್ಕೆ ಸಂಬಂಧಿಸಿದಂತೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪರಸ್ಪರ ದೂರು-ಪ್ರತಿದೂರು ದಾಖಲಾಗಿದೆ.







ಕಡೂರಿನಿಂದ ಉಜಿರೆ ಮಾರ್ಗವಾಗಿ ಮಂಗಳೂರಿಗೆ ತೆರಳುತ್ತಿದ್ದ ಸರ್ಕಾರಿ ಬಸ್‌ಗೆ ಮಹಿಳೆಯೊಬ್ಬರು ತಮ್ಮ ಕಾರನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ನಡೆಸಿದ್ದಾರೆ ಎನ್ನಲಾಗಿದೆ.ಬಸ್ ತನ್ನ ಕಾರಿಗೆ ಡಿಕ್ಕಿ ಹೊಡೆದಿದೆ ಎಂದು ಆರೋಪಿಸಿ, ಮಹಿಳೆಯು ತನ್ನ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಬಸ್ ಚಾಲಕ ವಸಂತ್ ಕುಮಾರ್ ದೂರಿನಲ್ಲಿ ತಿಳಿಸಿದ್ದಾರೆ.






ಸಾರ್ವಜನಿಕ ಸ್ಥಳದಲ್ಲಿ ಬಸ್ ಚಾಲಕ ತನಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಅಪಮಾನ ಮಾಡಿದ್ದಾರೆ ಎಂದು ಮಹಿಳೆ ಪ್ರತಿದೂರು ನೀಡಿದ್ದಾರೆ.ಪ್ರಸ್ತುತ ಎರಡೂ ಕಡೆಯ ದೂರುಗಳನ್ನು ಸ್ವೀಕರಿಸಿರುವ ಬಂಟ್ವಾಳ ನಗರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

error: Content is protected !!
Scroll to Top