(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.25. ವಿಶ್ವಾಸಮತ ಯಾಚನೆ ಪ್ರಸ್ತಾಪವನ್ನು ನೂತನ ಮುಖ್ಯಮಂತ್ರಿ ಮಂಡಿಸಿದ್ದು, ವಿಶ್ವಾಸಮತ ಪ್ರಕ್ರಿಯೆ ಆರಂಭಗೊಂಡಿದೆ.
ಸದನದಲ್ಲಿ ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ, ಜನರ ಕಷ್ಟಗಳನ್ನು ತುಂಬಾ ಹತ್ತಿರದಿಂದ ನಾನು ನೋಡಿದ್ದು, ಯಾವುದೇ ಸಮಾಜವೂ ಪ್ರತಿಭಟನೆ ಮಾಡಲುಅವಕಾಶ ನೀಡುವುದಿಲ್ಲ. ನಾನಿನ್ನೂ ಅಧಿಕೃತ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿಲ್ಲ. ಬಹುಮತ ಸಾಬೀತುಪಡಿಸಿದ ನಂತರ ನಾನು ಎಲ್ಲಾ ಯೋಜನೆಗಳನ್ನು ಜಾರಿ ಮಾಡುತ್ತೇನೆ ಎಂದರು.
ಈ ನಡುವೆ ವಿಧಾನಸಭೆಯ ನೂತನ ಸ್ಪೀಕರ್ ಆಗಿ ಕೆ.ಆರ್.ರಮೇಶ್ ಕುಮಾರ್ ಅವರು ಸರ್ವಾನುಮತದಿಂದ ಆಯ್ಕೆಯಾದರು. ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಪ್ರತಿಪಕ್ಷ ನಾಯಕ ಬಿಎಸ್ ಯಡಿಯೂರಪ್ಪ ಅವರು ಅವಿರೋಧವಾಗಿ ಸ್ಪೀಕರ್ ಆಗಿ ಆಯ್ಕೆಯಾದ ರಮೇಶ್ ಕುಮಾರ್ ಅವರನ್ನು ಸಭಾಧ್ಯಕ್ಷರ ಪೀಠಕ್ಕೆ ಕರೆದೊಯ್ದರು. ರಮೇಶ್ ಕುಮಾರ್ ಸಭಾಧ್ಯಕ್ಷರ ಪೀಠವನ್ನು ಅಲಂಕರಿಸಿದ್ದಾರೆ.