ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ: ಗ್ರಾಹಕರಿಗೆ ನಿರಾಳ

(ನ್ಯೂಸ್‌ ಕಡಬ) newskadaba.com,   ಜು.01:: ಕೇಂದ್ರ ಸರ್ಕಾರವು ವಾಣಿಜ್ಯ ಬಳಕೆಯ ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧಗಳನ್ನು ತೆರವುಗೊಳಿಸಿದ ಬೆನ್ನಲ್ಲೇ, ಬೆಲೆಯಲ್ಲಿ ಭಾರಿ ಇಳಿಕೆ ಮಾಡಿದೆ.

ಜುಲೈ 1ರಿಂದ ಜಾರಿಗೆ ಬರುವಂತೆ 19 ಕೆ.ಜಿ ತೂಕದ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ₹183.50 ಕಡಿತಗೊಳಿಸಲಾಗಿದೆ.ಈ ಇಳಿಕೆಯಿಂದಾಗಿ ₹3,113.50 ಇದ್ದ ಸಿಲಿಂಡರ್ ಬೆಲೆ ಈಗ ₹2,930 ಕ್ಕೆ ತಲುಪಿದೆ.

14.2 ಕೆ.ಜಿ ತೂಕದ ಗೃಹಬಳಕೆಯ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ.

Scroll to Top