ಸರಕಾರ ರೈತರ ಸಾಲ ಮನ್ನಾ ಮಾಡದಿದ್ದಲ್ಲಿ ಸೋಮವಾರ ಕರ್ನಾಟಕ ಬಂದ್ ► ವಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.25. ಭಾನುವಾರದೊಳಗೆ ಸಾಲಮನ್ನಾ ಮಾಡದಿದ್ದಲ್ಲಿ ಸೋಮವಾರದಂದು ಕರ್ನಾಟಕ ರಾಜ್ಯ ಸ್ವಯಂಘೋಷಿತ ಬಂದ್ ಆಗಲಿದೆ ಎಂದು ಬಿಜೆಪಿ‌ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಎಚ್ಚರಿಸಿದ್ದಾರೆ.

ಸದನದಲ್ಲಿ ಸುದೀರ್ಘ ಭಾಷಣ ಮಾಡಿದ ಅವರು ಜೆಡಿಎಸ್ – ಕಾಂಗ್ರೆಸ್ ಸಮ್ಮಿಶ್ರ ಸರಕಾರದ ನೂತನ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಬಹುಮತ ಸಾಬೀತುಪಡಿಸಿದ 48 ಗಂಟೆಗಳ ಒಳಗೆ ರಾಜ್ಯದ ರೈತರ ಮೇಲಿರುವ ಸಹಕಾರಿ ಬ್ಯಾಂಕುಗಳು, ರಾಷ್ಟ್ರೀಕೃತ ಬ್ಯಾಂಕುಗಳಲ್ಲಿರುವ ಸಾಲವನ್ನು ಮನ್ನಾ ಮಾಡದಿದ್ದಲ್ಲಿ ಕರ್ನಾಟಕ ಬಂದ್ ಆಗಲಿದೆ ಎಂದು ಸದನದಿಂದ ಹೊರನಡೆದು ಸಭಾತ್ಯಾಗ ಮಾಡಿದರು.

Also Read  (ಜು.31)ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಸಿಎಂ ಭೇಟಿ

error: Content is protected !!
Scroll to Top