9 ವರ್ಷಗಳಿಂದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಜು. 02. 9 ವರ್ಷಗಳಿಂದ ಆರೋಪಿತನಾಗಿ ತಲೆಮರೆಸಿಕೊಂಡಿದ್ದ ಆಂಧ್ರಪ್ರದೇಶದ ಚಿತ್ತೂರು ನಿವಾಸಿ ಶ್ರೀನಿವಾಸಲು ವಿ. ಎಂಬಾತನನ್ನು ಧರ್ಮಸ್ಥಳ ಠಾಣಾ ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ.

 

ಧರ್ಮಸ್ಥಳ ಠಾಣಾ ಅ.ಕ್ರ:169/2016.  ಕಲಂ, 379, 201  ಐಪಿಸಿ ಪ್ರಕರಣದಲ್ಲಿ ಆರೋಪಿತನಾಗಿ ಸುಮಾರು 09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಧರ್ಮಸ್ಥಳ ಠಾಣಾ ಸಿಬ್ಬಂದಿಗಳಾದ ವ್ರಷಭ, ಚರಣ್ ರಾಜ್ ಎಂಬವರು ಆಂಧ್ರಪ್ರದೇಶದ ಚಿತ್ತೂರು  ಎಂಬಲ್ಲಿಂದ ದಸ್ತಗಿರಿ ಮಾಡಿ  ಜುಲೈ 1ರಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ. ಸದ್ಯ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Scroll to Top