ಡಿಸಿ ಆದೇಶ ಉಲ್ಲಂಘಿಸಿ ತರಗತಿ ನಡೆಸಿದ ಪುತ್ತೂರಿನ ಖಾಸಗಿ ಕಾಲೇಜಿಗೆ ತಹಶೀಲ್ದಾರ್ ನೋಟಿಸ್

(ನ್ಯೂಸ್‌ ಕಡಬ) newskadaba.com, ಜು.03 :ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದರೂ, ನಿಯಮ ಉಲ್ಲಂಘಿಸಿ ತರಗತಿ ನಡೆಸಿದ ಪುತ್ತೂರಿನ ಖಾಸಗಿ ಕಾಲೇಜೊಂದಕ್ಕೆ ತಹಶೀಲ್ದಾರ್ ಬಿ.ಎಸ್. ಕೂಡಲಗಿ ಅವರು ನೋಟಿಸ್ ಜಾರಿ ಮಾಡಿದ್ದಾರೆ.

ಹವಾಮಾನ ಇಲಾಖೆಯ ರೆಡ್ ಅಲರ್ಟ್ ಸೂಚನೆಯಂತೆ ಜುಲೈ 2ರಂದು ಜಿಲ್ಲೆಯ ಎಲ್ಲಾ ಶಾಲೆ-ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ಅಧಿಕೃತ ರಜೆ ಆದೇಶ ಹೊರಡಿಸಿದ್ದರು.ಈ ಆದೇಶದ ನಡುವೆಯೂ ಪುತ್ತೂರಿನ ಖಾಸಗಿ ಕಾಲೇಜೊಂದರ ಪದವಿ ಪೂರ್ವ ವಿಭಾಗದಲ್ಲಿ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ತರಗತಿಗಳನ್ನು ನಡೆಸಲಾಗಿತ್ತು.

ಮಾಹಿತಿ ಲಭ್ಯವಾಗುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್ ಬಿ.ಎಸ್. ಕೂಡಲಗಿ ಅವರು ಪರಿಶೀಲನೆ ನಡೆಸಿ, ಜಿಲ್ಲಾಧಿಕಾರಿಗಳ ಆದೇಶ ಉಲ್ಲಂಘಿಸಿದ್ದಕ್ಕಾಗಿ ಕಾಲೇಜು ಆಡಳಿತ ಮಂಡಳಿಗೆ ಕಾರಣ ಕೇಳಿ ನೋಟಿಸ್ ನೀಡಿದ್ದಾರೆ.

Scroll to Top