ಪುತ್ತೂರು ಯುವತಿಗೆ ವಂಚನೆ ಪ್ರಕರಣ ತಿಂಗಳ 2ನೇ ತಾರೀಕಿನೊಳಗೆ ಭತ್ಯೆ ನೀಡಲು ಹೈಕೋರ್ಟ್ ಆದೇಶ



(ನ್ಯೂಸ್ ಕಡಬ) newskadaba.com ಪುತ್ತೂರು, ಜು. 03. ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚಿಸಿದ ಆರೋಪ ಹೊತ್ತಿರುವ ಕೃಷ್ಣ ಜಿ. ರಾವ್ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ನಿರ್ದೇಶನ ನೀಡಿದೆ.







ಪ್ರಕರಣ ಇತ್ಯರ್ಥವಾಗುವವರೆಗೆ, ಸಂತ್ರಸ್ತೆ ಮತ್ತು ಮಗುವಿನ ಪಾಲನೆಗಾಗಿ ಆರೋಪಿ ಕೃಷ್ಣ ಜಿ. ರಾವ್ ಅಥವಾ ಅವರ ಪೋಷಕರು ಪ್ರತಿತಿಂಗಳ ಎರಡನೇ ದಿನದೊಳಗೆ ₹75,000 ಅನ್ನು ತಪ್ಪದೇ ಪಾವತಿಸಬೇಕು ಎಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಸೂಚಿಸಿದೆ.






ಪ್ರಕರಣವನ್ನು ರಾಜಿ ಮೂಲಕ ಇತ್ಯರ್ಥಪಡಿಸಲು ಆರೋಪಿ ಸಲ್ಲಿಸಿದ್ದ ಅರ್ಜಿಯ ಮೇರೆಗೆ, ಹೈಕೋರ್ಟ್ ಮಧ್ಯಸ್ಥಿಕೆ ಕೇಂದ್ರದಲ್ಲಿ ಎರಡೂ ಕಡೆಯವರು ಹೇಳಿಕೆ ದಾಖಲಿಸಿದ್ದಾರೆ. ಆರೋಪಿ ಖುದ್ದು ಹಾಜರಾಗದೆ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಿದ್ದರು. ಮಧ್ಯಸ್ಥಿಕೆ ಕೇಂದ್ರದ ವರದಿಯನ್ನು ಪರಿಗಣಿಸಿ ಮುಂದಿನ ಆದೇಶ ನೀಡುವುದಾಗಿ ತಿಳಿಸಿರುವ ನ್ಯಾಯಾಲಯ, ವಿಚಾರಣೆಯನ್ನು ಜುಲೈ 23ಕ್ಕೆ (ಮಧ್ಯಾಹ್ನ 2:30ಕ್ಕೆ) ಮುಂದೂಡಿದೆ.

error: Content is protected !!
Scroll to Top