ಮತದಾರರ ಪಟ್ಟಿ ಪರಿಷ್ಕರಣೆ: ಬಿಎಲ್‌ಒಗಳು ಕಡ್ಡಾಯವಾಗಿ ಮನೆ-ಮನೆಗೆ ಭೇಟಿ ನೀಡಲು ಮುಖ್ಯ ಚುನಾವಣಾಧಿಕಾರಿ ಆದೇಶ



(ನ್ಯೂಸ್‌ ಕಡಬ) newskadaba.com, ಜು.03 ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ವೇಳೆ ಬಿಎಲ್‌ಒಗಳು (BLO) ಕಡ್ಡಾಯವಾಗಿ ಮನೆ-ಮನೆಗೆ ಭೇಟಿ ನೀಡಿ ಗಣತಿ ನಮೂನೆಗಳನ್ನು ವಿತರಿಸಬೇಕು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಆದೇಶಿಸಿದ್ದಾರೆ.







ಕಚೇರಿಗಳಲ್ಲಿ ಅಥವಾ ಒಂದೇ ಸ್ಥಳದಲ್ಲಿ ಫಾರ್ಮ್‌ಗಳನ್ನು ವಿತರಿಸುತ್ತಿರುವುದರ ಕುರಿತು ಬಂದ ದೂರುಗಳ ಹಿನ್ನೆಲೆಯಲ್ಲಿ, ಇಂತಹ ನಿಯಮಬಾಹಿರ ಕ್ರಮಗಳಿಗೆ ಅವಕಾಶ ನೀಡಬಾರದು ಎಂದು ಎಲ್ಲಾ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ.






ನಮೂನೆಗಳನ್ನು ಭರ್ತಿ ಮಾಡಲು ತೊಂದರೆ ಪಡುವ ಮತದಾರರಿಗೆ ನೆರವಾಗಲು ‘ಮತದಾರರ ಸೌಲಭ್ಯ ಕೇಂದ್ರ’ಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಸೂಚಿಸಲಾಗಿದೆ.ಪರಿಷ್ಕರಣೆ ಪ್ರಕ್ರಿಯೆಯು ಸಂಪೂರ್ಣ ಪಾರದರ್ಶಕವಾಗಿ ಮತ್ತು ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಗಳ ಅನ್ವಯವೇ ನಡೆಯಬೇಕು ಎಂದು ಸ್ಪಷ್ಟಪಡಿಸಲಾಗಿದೆ.

error: Content is protected !!
Scroll to Top