ಕುಂತೂರು: ಶಾಲೆಗೆಂದು ತೆರಳಿ ನಾಪತ್ತೆಯಾಗಿದ್ದ ಬಾಲಕ ಬೆಂಗಳೂರಿನಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಮೇ.24. ಶಾಲೆಗೆಂದು ತೆರಳಿ ಮನೆಯಿಂದ ತೆರಳಿ ಶಾಲೆಗೂ ತೆರಳದೆ ಮನೆಗೂ ಬಾರದೆ ನಾಪತ್ತೆಯಾಗಿದ್ದ ಬಾಲಕ ಶುಕ್ರವಾರದಂದು ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾನೆ.

ಕುಂತೂರು ಗ್ರಾಮದ ಕಂಡತ್ತಡ್ಕ ನಿವಾಸಿ ಜಯಂತಿ ಎಂಬವರ ಪುತ್ರ, ಪದವು ಸೈಂಟ್ ಜಾರ್ಜ್ ಪ್ರೌಢಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ ಶರತ್ ಕುಮಾರ್ ಬುಧವಾರದಂದು ಶಾಲೆಗೆಂದು ತೆರಳಿ ಆ ಬಳಿಕ ನಾಪತ್ತೆಯಾಗಿದ್ದನೆನ್ನಲಾಗಿದೆ. ಸಂಬಂಧಿಕರ ಮನೆಯಲ್ಲೆಲ್ಲಾ ಹುಡುಕಾಡಿ ಪತ್ತೆಯಾಗದ ಕಾರಣ ಆತನ ತಾಯಿ ಕಡಬ ಠಾಣೆಗೆ ದೂರು ನೀಡಿದ್ದರು. ಶುಕ್ರವಾರದಂದು ಈತನನ್ನು ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಠಾಣಾ ಪೊಲೀಸರು ಪತ್ತೆಹಚ್ಚಿ ಕಡಬ ಠಾಣೆಗೆ ಮಾಹಿತಿ ನೀಡಿದ್ದಾರೆ.

Also Read  ಮಂಗಳೂರು: ಎರಡು ಪ್ರತ್ಯೇಕ ಪ್ರಕರಣ ➤ ಚಿನ್ನದ ಕರಿಮಣಿ ಸರ ಎಗರಿಸಿದ ಖದೀಮರು

error: Content is protected !!
Scroll to Top