ವಿಟ್ಲ: ರಸ್ತೆಗೆ ಅಡ್ಡ ಬಂದ ಹಾವು; ಆಟೋ-ಬೈಕ್ ಮುಖಾಮುಖಿ ಡಿಕ್ಕಿ, ಸವಾರನಿಗೆ ಗಂಭೀರ ಗಾಯ



(ನ್ಯೂಸ್‌ ಕಡಬ) newskadaba.com,  ಜು.04 ವಿಟ್ಲ: ರಸ್ತೆಯಲ್ಲಿ ಹಾವು ಅಡ್ಡ ಬಂದ ಪರಿಣಾಮ ಆಟೋ ರಿಕ್ಷಾ ಮತ್ತು ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ವಿಟ್ಲ ಸಮೀಪದ ಕೆಲಿಂಜ ಪೆಲತ್ತಡ್ಕ ಎಂಬಲ್ಲಿ ನಡೆದಿದೆ.







ಕಲ್ಲಡ್ಕದಿಂದ ವಿಟ್ಲ ಕಡೆಗೆ ಚಲಿಸುತ್ತಿದ್ದ ಆಟೋ ರಿಕ್ಷಾದ ಮುಂದಿದ್ದ ವಾಹನ ಸವಾರರು ರಸ್ತೆಯಲ್ಲಿ ಹಾವು ಇರುವುದನ್ನು ಕಂಡು ತಕ್ಷಣ ಬ್ರೇಕ್ ಹಾಕಿದ್ದಾರೆ. ಈ ವೇಳೆ ಆಟೋ ಚಾಲಕ ನಿಯಂತ್ರಣ ತಪ್ಪಿ ವಾಹನವನ್ನು ಬಲಭಾಗಕ್ಕೆ ತಿರುಗಿಸಿದಾಗ, ಎದುರಿನಿಂದ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಮುಖಾಮುಖಿ ಡಿಕ್ಕಿ ಹೊಡೆದಿದೆ.






error: Content is protected !!
Scroll to Top