ಕಡಬ ತಾಲೂಕಿನ 9 ಗ್ರಾಮ ಪಂಚಾಯತ್’ಗಳಲ್ಲಿ ಏಕಕಾಲದಲ್ಲಿ 45 ಕಿ.ಮೀ. ಸ್ವಚ್ಛತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 04. ದ.ಕ.ಜಿ.ಪಂ. ಸ್ವಚ್ಛ ಭಾರತ್ ಮಿಷನ್ ಗ್ರಾಮೀಣ, ತಾಲೂಕು ಪಂಚಾಯತ್ ಕಡಬ ಹಾಗೂ ವಿವಿಧ ಸಂಘ-ಸಂಸ್ಥೆಗಳು, ವಿವಿಧ ಇಲಾಖೆಗಳ ಸಹಕಾರದೊಂದಿಗೆ ಮಹಾತ್ಮ ಗಾಂಧಿ ಗ್ರಾಮ ಪಂಚಾಯತ್‍ಗಳ ಹಾಗೂ ಕಡಬ ಪಟ್ಟಣ ಪಂಚಾಯತ್, ಕಡಬ ತಾಲೂಕು ಪಂಚಾಯತ್ ಸಂಯುಕ್ತಾಶ್ರಯದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯವನ್ನು ಸಂಪರ್ಕಿಸುವ ಮತ್ತು ಕಡಬ ತಾಲೂಕು ಕೇಂದ್ರದ ಮೂಲಕ ಹಾದು ಹೋಗುವ ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ಬದಿ ಸ್ವಚ್ಛತಾ ಕಾರ್ಯ ಶನಿವಾರ ನಡೆಯಿತು.
ಹೆದ್ದಾರಿ ಬದಿ ಗ್ರಾಮ ಪಂಚಾಯತ್‍ಗಳಾದ ಕೊಯಿಲ, ರಾಮಕುಂಜ, ಆಲಂಕಾರು, ಪೆರಾಬೆ, ಕುಟ್ರುಪಾಡಿ, ಕಡಬ ಪಟ್ಟಣ ಪಂಚಾಯತ್, ಕಡಬ ತಾಲೂಕು ಪಂಚಾಯತ್, ಮರ್ಧಾಳ, ಐತ್ತೂರು, ಬಿಳಿನೆಲೆ ಹಾಗೂ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಸ್ವಚ್ಛತೆ ನಡೆಸಲಾಯಿತು.

Scroll to Top