(ನ್ಯೂಸ್ ಕಡಬ) newskadaba.com ಕಡಬ, ಜು. 04. ಕಡಬ ಪಟ್ಟಣ ಪಂಚಾಯತ್ ಅಧ್ಯಕ್ಷೆ ತಮನ್ನಾ ಜಬೀನ್, ಉಪಾಧ್ಯಕ್ಷೆ ನೀಲಾವತಿ ಶಿವರಾಮ್, ಸದಸ್ಯರಾದ ಕುಸುಮ, ದಯಾನಂದ, ಶಾಲಿನಿ, ಮೋಹನ್ ದಾಸ್, ಮುಖ್ಯಾಧಿಕಾರಿ ಲೀಲಾವತಿ ಹಾಗೂ ಸಿಬ್ಬಂದಿಗಳು, ಟೂರಿಸ್ಟ್ ವಾಹನ ಚಾಲಕ-ಮಾಲಕರ ಸಂಘ- ಆಟೋ ರಿಕ್ಷಾ ಚಾಲಕ-ಮಾಲಕರ ಸಂಘ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ನಾಗರಿಕರು ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡು ಕಡಬ ಪೇಟೆಯುದ್ಧಕ್ಕೂ ಕಸ ಹೆಕ್ಕುವ ಮೂಲಕ ಮತ್ತು ಅಂಗಡಿ ಮುಂಭಾಗ ಕಸ ಎಸೆಯದೆ ಕಸದ ಬುಟ್ಟಿಗೆ ಕಸ ಹಾಕುವಂತೆ ನಾಗರಿಗೆ ತಿಳಿಸಲಾಯಿತು.
ವಿಶೇಷ ಸಂಘ–ಸಂಸ್ಥೆಗಳ ಸಹಕಾರ, 45 ಕಿ.ಮೀ. ಸ್ವಚ್ಛತೆ
ರಾಜ್ಯ ಹೆದ್ದಾರಿ ಸ್ವಚ್ಛತೆಯಲ್ಲಿ ಗ್ರಾಮವಾರು ಒಡಿಯೂರು ಸಂಘ, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘ, ರೋಟರಿ ಕ್ಲಬ್, ಲಯನ್ಸ್ ಕ್ಲಬ್, ಯುವಕ-ಯುವತಿ ಮಂಡಲ, ಶೌರ್ಯ ತಂಡ, ಶಿಕ್ಷಣ ಸಂಸ್ಥೆಗಳು, ಸಹಕಾರಿ ಸಂಘಗಳು, ಸ್ವ-ಸಹಾಯ ಸಂಘಗಳು, ಧಾರ್ಮಿಕ ಸಂಸ್ಥೆಗಳು, ಎಲ್ಲಾ ಸಂಘ-ಸಂಸ್ಥೆಗಳು, ಮೆಸ್ಕಾಂ, ಕಂದಾಯ, ಆರೋಗ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ (ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು) ಆಟೋ ಚಾಲಕ-ಮಾಲಕರ ಸಂಘ, ವರ್ತಕರ ಸಂಘ, ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು ಹಾಗೂ ಗ್ರಾಮ ಪಂಚಾಯತ್ ಜನಪ್ರತಿನಿಧಿಗಳು, ಗ್ರಾಮ ಪಂಚಾಯತ್ ಗಳ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಿಬ್ಬಂದಿವರ್ಗ, ಗ್ರಾಮಸ್ಥರ ಸಹಕಾರದೊಂದಿಗೆ ವಿಶೇಷವಾಗಿ ಹೆದ್ದಾರಿಯುದ್ಧಕ್ಕೂ ಸುಮಾರು 45 ಕಿ.ಮೀ. ಸ್ವಚ್ಛತೆಯನ್ನು ಏಕಕಾಲದಲ್ಲಿ ನಡೆಸಲಾಯಿತು.
ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಛತಾ ಪ್ರತಿಜ್ಞೆ
ಹೆದ್ದಾರಿ ಹಾದುಹೋಗುವ 9 ಗ್ರಾಮ ಪಂಚಾಯತ್ ಗಳಲ್ಲಿ ಸ್ವಚ್ಛತೆಯ ಪ್ರತಿಜ್ಞೆ ಕೈಗೊಂಡು ಶುಚಿತ್ವದ ನಡೆಸಲಾಯಿತು. ಆಯಾಯ ಗ್ರಾಮ ಪಂಚಾಯತ್ ಗಳಲ್ಲಿ ಹಲವು ಗುಂಪುಗಳನ್ನಾಗಿ ಮಾಡಿ ಸ್ವಚ್ಛತಾ ಶ್ರಮದಾನ ಕೈಗೊಳ್ಳಲಾಯಿತು.
ದ.ಕ.ಜಿ.ಪಂ.ನ ಉಪಕಾರ್ಯದರ್ಶಿ ಹಾಗೂ ಸ್ವಚ್ಛ ಭಾರತ್ ಮಿಷನ್ ನೋಡಲ್ ಅಧಿಕಾರಿ ಜಯಲಕ್ಷ್ಮೀ ರಾಯಕೋಡ, ಕಡಬ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಭಂಡಾರಿ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು.
ಜಿಲ್ಲಾ ಪಂಚಾಯತ್ ಸ್ವಚ್ಚ ಭಾರತ್ ಮಿಷನ್ ಜಿಲ್ಲಾ ಸಮಾಲೋಚಕ ಡೊಂಬಯ್ಯ ಇಡ್ಕಿದು, ನವೀನ್, ಪವನ್ ಮತ್ತಿತರರು ಉಪಸ್ಥಿತರಿದ್ದರು.









