ಅಕ್ರಮ ಮಣ್ಣು ಗಣಿಗಾರಿಕೆ- ಸ್ಥಳಕ್ಕೆ ಪೊಲೀಸ್ ದಾಳಿ



(ನ್ಯೂಸ್ ಕಡಬ) newskadaba.com ಜು. 05. ಅಕ್ರಮವಾಗಿ ಕೆಂಪು ಕಲ್ಲು ಮತ್ತು ಮಣ್ಣು ಗಣಿಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ ವಿಟ್ಲ ಪೊಲೀಸರು ವಾಹನ ಮತ್ತು ಯಂತ್ರೋಪಕರಣಗಳನ್ನು ವಶಪಡಿಸಿಕೊಂಡ ಘಟನೆ ನಡೆದಿದೆ.







 

ವರದಿಯ ಪ್ರಕಾರ, ಕರೋಪಾಡಿ ಗ್ರಾಮದ ಮುಗುಳಿ ಎಂಬಲ್ಲಿ ಗಣಿಗಾರಿಕೆ ನಡೆಯುತ್ತಿದ್ದ ಬಗ್ಗೆ ಮಾಹಿತಿ ಮೇರೆಗೆ ವಿಟ್ಲ ಎಸೈ ರಾಮಕೃಷ್ಣ ಮತ್ತು ಸಿಬ್ಬಂದಿಗಳು ದಾಳಿ ನಡೆಸಿದ್ದು, ಪೊಲೀಸ್ ವಾಹನವನ್ನು ನೋಡಿದ ಗಣಿಗಾರಿಕೆ ಮಾಡುತ್ತಿದ್ದವರು ಅಲ್ಲಿಂದ ಪರಾರಿಯಾಗಿದ್ದಾರೆ.






 

ಸ್ಥಳವನ್ನು ಪರಿಶೀಲಿಸಿದಾಗ ಅಕ್ರಮ ಕೆಂಪು ಕಲ್ಲು ಗಣಿಗಾರಿಕೆ ಮಾಡುತ್ತಿರುವುದು ಕಂಡುಬಂದಿದ್ದು, ಕೃತ್ಯಕ್ಕೆ ಬಳಸಿದ ಯಂತ್ರೋಪಕರಣಗಳು ಸ್ಥಳದಲ್ಲಿ ಪತ್ತೆಯಾಗಿದೆ. ಸೊತ್ತುಗಳನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಸ್ವಾಧೀನಪಡಿಸಿ, ಯಾವುದೇ ಪರವಾನಗಿ ಇಲ್ಲದೇ ಗಣಿಗಾರಿಕೆ ಮಾಡುತ್ತಿದ್ದ ಆರೋಪಿಗಳ ವಿರುದ್ದ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!
Scroll to Top