(ನ್ಯೂಸ್ ಕಡಬ) newskadaba.com ಮಂಗಳೂರು, ಜು.05. ನಗರದ ಹಳೆಯ ಬಸ್ ನಿಲ್ದಾಣ ಮತ್ತು ಇತರ ಸಾರ್ವಜನಿಕ ಸ್ಥಳಗಳ ಬಳಿ ಮುಂಜಾನೆ ಅಕ್ರಮ ಮದ್ಯ ಮಾರಾಟ ಮಾಡಲಾಗುತ್ತಿದೆ ಎಂದು ಸಾರ್ವಜನಿಕರಿಂದ ಬಂದ ದೂರುಗಳ ಮೇರೆಗೆ, ಉಡುಪಿ ನಗರ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಒಬ್ಬ ವ್ಯಕ್ತಿಯನ್ನು ಬಂಧಿಸಿದ ಘಟನೆ ನಡೆದಿದೆ.
ಬಂಧಿತ ವ್ಯಕ್ತಿಯನ್ನು ಬಾಗಲಕೋಟೆ ಮೂಲದ ಕಾಂತ್ಯಪ್ಪ ಮೇಟಿ (32) ಎಂದು ಗುರುತಿಸಲಾಗಿದೆ.
ಆರೋಪಿಯು ಸ್ಕೂಟರ್‌ನಲ್ಲಿ ಬಂದು ನಗರ ಬಸ್ ನಿಲ್ದಾಣದಲ್ಲಿ ಮದ್ಯದ ಪ್ಯಾಕೆಟ್‌ಗಳನ್ನು ಮಾರಾಟ ಮಾಡುತ್ತಿದ್ದುದನ್ನು ಗಮನಿಸಿದ ಪೊಲೀಸರು ಆತನನ್ನು ತಕ್ಷಣ ವಶಕ್ಕೆ ಪಡೆದಿದ್ದಾರೆ. ತಪಾಸಣೆಯ ಸಮಯದಲ್ಲಿ, ಪೊಲೀಸರು ಆತನ ಬಳಿಯಿಂದ ಸುಮಾರು 4 ಲೀಟರ್ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ. ಈ ಕುರಿತು ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.









