ಬೆಳಕಿಲ್ಲದ ಬಸ್ಸಿಗೆ ಮೊಬೈಲ್ ಟಾರ್ಚೇ ದಾರಿ ಕೆಕೆಆರ್ಟಿಸಿ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

(ನ್ಯೂಸ್ ಕಡಬ) newskadaba.com ಜು. 05. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಕೆಆರ್‌ಟಿಸಿ)ಗೆ ಸೇರಿದ ಬಸ್ಸೊಂದು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಸಂಚರಿಸಿರುವ ಘಟನೆ ಕಲಬುರಗಿಯಲ್ಲಿ ಬೆಳಕಿಗೆ ಬಂದಿದೆ.

 

ಮಾಹಿತಿ ಪ್ರಕಾರ, ಕಲಬುರಗಿಯಿಂದ ಚಿಂಚೋಳಿಗೆ ಸಂಚರಿಸುವ ಈ ಬಸ್‌ನ ಹೆಡ್‌ ಲೈಟ್‌ಗಳು ಕೆಟ್ಟು ಹೋಗಿದ್ದರೂ, ಅವುಗಳನ್ನು ದುರಸ್ತಿ ಮಾಡಿಲ್ಲ ಎನ್ನಲಾಗಿದೆ. ಇದರಿಂದ ರಾತ್ರಿ ವೇಳೆ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಬಸ್ ಓಡಿಸಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

 

ಕಲಬುರಗಿ–ಚಿಂಚೋಳಿ ನಡುವಿನ ಅಂತರ ಸುಮಾರು 90 ಕಿಲೋಮೀಟರ್ ಆಗಿದ್ದು, ಇಂತಹ ಪರಿಸ್ಥಿತಿಯಲ್ಲಿ ಬಸ್ ಸಂಚರಿಸಿರುವುದು ಪ್ರಯಾಣಿಕರ ಜೀವಕ್ಕೆ ಅಪಾಯ ತಂದೊಡ್ಡಿದೆ ಎಂಬ ಆರೋಪ ಕೇಳಿಬಂದಿದೆ. ಹೆಡ್‌ಲೈಟ್ ಇಲ್ಲದೆ ರಾತ್ರಿ ವೇಳೆ ಬಸ್ ಓಡಿಸುವುದು ರಸ್ತೆ ಸುರಕ್ಷತಾ ನಿಯಮಗಳ ಉಲ್ಲಂಘನೆಯಾಗಿದ್ದು, ಯಾವುದೇ ಕ್ಷಣದಲ್ಲಿ ಅಪಘಾತ ಸಂಭವಿಸುವ ಸಾಧ್ಯತೆ ಇದೆ ಎಂದು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ.

Scroll to Top