ಪುತ್ತೂರು: ಜಿಮ್ ಟ್ರೈನರ್ ಮೃತ್ಯು..!

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 05. ಜಿಮ್ ಟ್ರೈನರ್ ಓರ್ವರು ಕುಸಿದು ಬಿದ್ದು ಮೃತಪಟ್ಟ ಘಟನೆ ಪುತ್ತೂರಿನಲ್ಲಿ ನಡೆದಿದೆ.

ಮೃತರನ್ನು ಮೂಲತಃ ಮಡoತ್ಯಾರ್ ನಿವಾಸಿ ಪ್ರಸ್ತುತ ಪುತ್ತೂರಿನ ಕಲ್ಲಿಮಾರ್ ನಲ್ಲಿ ವಾಸವಿರುವ ಸಚಿನ್ ರೈ ಎಂದು ಗುರುತಿಸಲಾಗಿದೆ. ಇವರು ಹಲವು ವರ್ಷಗಳಿಂದ ಜಿಮ್ ಟ್ರೈನರ್ ಆಗಿದ್ದರು. ಇಂದು ಮುಂಜಾನೆ ಕುಸಿದು ಬಿದ್ದ ಸ್ಥಿತಿಯಲ್ಲಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅದಾಗಲೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

Scroll to Top