ರದ್ದಾದ ಬಿಪಿಎಲ್ ಕಾರ್ಡ್ ಮರುಪಡೆಯಲು ಮುಕ್ತ ಅವಕಾಶ: 45 ದಿನಗಳ ಕಾಲಮಿತಿ ರದ್ದುಗೊಳಿಸಿದ ಸರ್ಕಾರ

(ನ್ಯೂಸ್‌ ಕಡಬ) newskadaba.com,ಜು.06  : ರಾಜ್ಯದಲ್ಲಿ ವಿವಿಧ ಕಾರಣಗಳಿಂದ ರದ್ದಾಗಿದ್ದ ಸುಮಾರು 4 ಲಕ್ಷಕ್ಕೂ ಅಧಿಕ ಬಿಪಿಎಲ್ ಪಡಿತರ ಚೀಟಿಗಳನ್ನು ಮರುಪಡೆಯಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅರ್ಹ ಫಲಾನುಭವಿಗಳಿಗೆ ಮುಕ್ತ ಅವಕಾಶ ಕಲ್ಪಿಸಿದೆ.

ಈ ಹಿಂದೆ ನಿಗದಿಪಡಿಸಲಾಗಿದ್ದ 45 ದಿನಗಳ ಕಾಲಮಿತಿಯನ್ನು ಸರ್ಕಾರ ರದ್ದುಗೊಳಿಸಿದ್ದು, ಅರ್ಹರು ಯಾವುದೇ ಆತಂಕವಿಲ್ಲದೆ ಅರ್ಜಿ ಸಲ್ಲಿಸಬಹುದಾಗಿದೆ.ಎಪಿಎಲ್‌ಗೆ ವರ್ಗಾವಣೆಗೊಂಡಿರುವ ಕಾರ್ಡ್‌ದಾರರು ತಾವು ಅರ್ಹರೆಂದು ಸಾಬೀತುಪಡಿಸಲು ಅಗತ್ಯ ದಾಖಲೆಗಳೊಂದಿಗೆ ತಮ್ಮ ವ್ಯಾಪ್ತಿಯ ತಾಲೂಕು ತಹಸೀಲ್ದಾರ್‌ಗೆ ಮನವಿ ಸಲ್ಲಿಸಬೇಕು.

ತಹಸೀಲ್ದಾರ್ ಮಟ್ಟದಲ್ಲಿ ದಾಖಲೆಗಳ ಪರಿಶೀಲನೆ ಮತ್ತು ಸ್ಥಳ ತನಿಖೆ ನಡೆದ ಬಳಿಕ, ನಿಯಮಾನುಸಾರ ಅರ್ಹತೆ ಹೊಂದಿರುವ ಕಾರ್ಡ್‌ಗಳನ್ನು ಬಿಪಿಎಲ್ ಆಗಿ ಮರು ಸ್ಥಾಪಿಸಲಾಗುತ್ತದೆ.ಅನರ್ಹ ಕಾರ್ಡ್‌ಗಳ ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಹೊಸದಾಗಿ ಬಿಪಿಎಲ್ ಕಾರ್ಡ್ ವಿತರಿಸಲು ಸರ್ಕಾರ ಯೋಜಿಸಿದೆ. ಈ ಮೂಲಕ ಯಾವುದೇ ಅರ್ಹ ಬಡ ಕುಟುಂಬವೂ ಪಡಿತರ ವ್ಯವಸ್ಥೆಯಿಂದ ವಂಚಿತವಾಗದಂತೆ ನೋಡಿಕೊಳ್ಳಲಾಗುವುದು ಎಂದು ಆಹಾರ ಇಲಾಖೆ ತಿಳಿಸಿದೆ.

Scroll to Top