ಕಾಲೇಜಿಗೆ ತೆರಳಲು ಬಸ್’ಗೆ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿಯಿರಿತ



(ನ್ಯೂಸ್ ಕಡಬ) newskadaba.com ಜು.‌ 06. ಕಾಲೇಜಿಗೆಂದು ತೆರಳಲು ಬಸ್‌ಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿಯಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಘಟನೆ ಬಂಟ್ವಾಳ ತಾಲೂಕಿನ ಮಂಚಿ ಸಮೀಪದ ಮೋಂತಿಮಾರು ಪಡ್ಪು ಬಸ್ ನಿಲ್ದಾಣದಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.







ಬಸ್ ನಿಲ್ದಾಣದ ಸಮೀಪ ದಿನಸಿ ಅಂಗಡಿ ನಡೆಸುತ್ತಿದ್ದ ಸ್ಥಳೀಯ ವ್ಯಕ್ತಿ ಈ ಕೃತ್ಯವೆಸಗಿದ್ದಾನೆ ಎನ್ನಲಾಗಿದೆ.






ವಿದ್ಯಾರ್ಥಿನಿ ಇಂದು ಬೆಳಗ್ಗೆ ಕಾಲೇಜಿಗೆ ತೆರಳಲು ಬಸ್‌ಗೆ ಕಾಯುತ್ತಿದ್ದ ವೇಳೆ ಆರೋಪಿ ಚೂರಿಯಿಂದ ಹಲ್ಲೆ ನಡೆಸಿದ್ದಾನೆ. ಗಾಯಗೊಂಡ ವಿದ್ಯಾರ್ಥಿನಿಯನ್ನು ಕೂಡಲೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಆರೋಪಿ ಬಂಧನಕ್ಕಾಗಿ ವಿಶೇಷ ತಂಡ ಶೋಧ ಕಾರ್ಯ ಮುಂದುವರಿಸಿದೆ.

error: Content is protected !!
Scroll to Top