ದೆಹಲಿ ಬಿರುಗಾಳಿ ಮಳೆಗೆ ಹಳಿ ತಪ್ಪಿದ ವಿಮಾನ ಸಂಚಾರ: 5 ಅಂತಾರಾಷ್ಟ್ರೀಯ ಸೇರಿದಂತೆ 15 ಫ್ಲೈಟ್ಸ್ ಹಾದಿ ಬದಲು

(ನ್ಯೂಸ್‌ ಕಡಬ) newskadaba.com,ಜು.06  : ನವದೆಹಲಿಯಲ್ಲಿ ಸುರಿದ ಭಾರಿ ಮಳೆ ಹಾಗೂ ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ದೆಹಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಒಟ್ಟು 15 ವಿಮಾನಗಳ ಮಾರ್ಗವನ್ನು ಬದಲಾಯಿಸಲಾಗಿದೆ.

ಸುರಕ್ಷತೆಯ ದೃಷ್ಟಿಯಿಂದ 10 ದೇಶೀಯ ಮತ್ತು 5 ಅಂತರರಾಷ್ಟ್ರೀಯ ವಿಮಾನಗಳನ್ನು ಜೈಪುರ ಹಾಗೂ ಲಕ್ನೋ ವಿಮಾನ ನಿಲ್ದಾಣಗಳಿಗೆ ತಿರುಗಿಸಲಾಗಿದೆ.ಭಾರಿ ಮಳೆಯಿಂದಾಗಿ ದೆಹಲಿಯ ತಾಪಮಾನವು 28 ಡಿಗ್ರಿ ಸೆಲ್ಸಿಯಸ್‌ಗೆ ಇಳಿಕೆಯಾಗಿದ್ದು, ದಿನವಿಡೀ ಗುಡುಗು ಸಹಿತ ಮಳೆ ಮುಂದುವರಿದಿದೆ.

ಕಳೆದ 24 ಗಂಟೆಗಳಲ್ಲಿ ನಗರದ ವಿವಿಧೆಡೆ ಸಾಧಾರಣ ಮಳೆಯಾಗಿದ್ದು, ಮುಂಬರುವ ಎರಡು ದಿನಗಳಲ್ಲಿ ತಾಪಮಾನವು ಇನ್ನು 2 ರಿಂದ 3 ಡಿಗ್ರಿ ಸೆಲ್ಸಿಯಸ್‌ನಷ್ಟು ಇಳಿಕೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ.

Scroll to Top