ದಸರಾ ಕಂಬಳಕ್ಕೆ ಸಂಸದ ಯದುವೀರ ವಿರೋಧ; ಮೊದಲು ದಸರಾ ಗೊಂದಲಗಳನ್ನು ಬಗೆಹರಿಸಿ ಎಂದು ಸರ್ಕಾರಕ್ಕೆ ಒತ್ತಾಯ



(ನ್ಯೂಸ್‌ ಕಡಬ) newskadaba.com,ಜು.06  : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸುವುದು ಸರಿಯಲ್ಲ ಎಂದು ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅಭಿಪ್ರಾಯಪಟ್ಟಿದ್ದಾರೆ.







ಕಂಬಳವು ಕರಾವಳಿ ಪ್ರದೇಶದ ವಿಶಿಷ್ಟ ಸಂಸ್ಕೃತಿ, ಧಾರ್ಮಿಕ ಹಿನ್ನೆಲೆ ಹಾಗೂ ನಂಬಿಕೆಯುಳ್ಳ ಆಚರಣೆಯಾಗಿದೆ. ಅದನ್ನು ಮೈಸೂರಿಗೆ ತಂದು ವಾಣಿಜ್ಯೀಕರಣ ಮಾಡುವುದು ಸೂಕ್ತವಲ್ಲ ಎಂದು ಅವರು ಹೇಳಿದ್ದಾರೆ.






ದಸರಾ ಸಮಯದಲ್ಲಿ ಎದುರಾಗುವ ಯುವ ದಸರಾ ಗೊಂದಲಗಳು, ವಸ್ತು ಪ್ರದರ್ಶನ ಹಾಗೂ ಟಿಕೆಟ್ ವಿತರಣೆಯಂತಹ ಪ್ರಮುಖ ಸಮಸ್ಯೆಗಳನ್ನು ರಾಜ್ಯ ಸರ್ಕಾರ ಮೊದಲು ಪರಿಹರಿಸಲಿ ಎಂದು ಒತ್ತಾಯಿಸಿದ್ದಾರೆ.

error: Content is protected !!
Scroll to Top