ರಸ್ತೆ ಗುಂಡಿ ತಪ್ಪಿಸಲು ಹೋಗಿ ದುರಂತ: ನಿಟ್ಟಡೆಯಲ್ಲಿ ಭೀಕರ ಅಪಘಾತಕ್ಕೆ ಮೇಸ್ತ್ರಿ ಕೆಲಸ ಮುಗಿಸಿ ಮರಳುತ್ತಿದ್ದ ವ್ಯಕ್ತಿ ಬಲಿ



(ನ್ಯೂಸ್ ಕಡಬ) newskadaba.com, ಜು.07: ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ನಿಟ್ಟಡೆ ಎಂಬಲ್ಲಿ ಜುಲೈ 5ರ ರಾತ್ರಿ ಗೂಡ್ಸ್ ಆಟೋರಿಕ್ಷಾ ಮತ್ತು ಬೈಕ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕರಿಮಣೇಲು ಗ್ರಾಮದ ಗಾಂಧಿನಗರ ನಿವಾಸಿ ರವೀಂದ್ರ ಮೂಲ್ಯ (47).ಮೃತರ ಸಹೋದರ ಜಗದೀಶ್ ಮೂಲ್ಯ (ಇವರಿಗೆ ತೀವ್ರ ಗಾಯಗಳಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ).ಮೇಸ್ತ್ರಿ ಕೆಲಸ ಮುಗಿಸಿ ಸಹೋದರರಿಬ್ಬರು ಗುರುವಾಯನಕೆರೆಯಿಂದ ವೇಣೂರಿಗೆ ಬೈಕ್‌ನಲ್ಲಿ ಹಿಂತಿರುಗುತ್ತಿದ್ದಾಗ, ನಿಟ್ಟಡೆಯ ಕುಂಭಶ್ರೀ ಶಾಲೆಯ ಬಳಿ ಈ ಅಪಘಾತ ಸಂಭವಿಸಿದೆ.
ಹೆದ್ದಾರಿಯಲ್ಲಿದ್ದ ಸಣ್ಣ ಗುಂಡಿಯೊಂದನ್ನು ತಪ್ಪಿಸಲು ಹೋಗಿ ಈ ದುರ್ಘಟನೆ ನಡೆದಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಅಪಘಾತದ ಬಳಿಕ ಆಟೋ ಚಾಲಕ ಹಾಗೂ ಸ್ಥಳೀಯರು ಸೇರಿ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.







error: Content is protected !!
Scroll to Top