ಜುಲೈ 9ರಂದು ಸುಬ್ರಹ್ಮಣ್ಯದಲ್ಲಿ ಪತ್ರಿಕಾ ದಿನಾಚರಣೆ



(ನ್ಯೂಸ್ ಕಡಬ) newskadaba.com ಕಡಬ, ಜು. 07. ಕಡಬ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಇದರ ನೇತೃತ್ವದಲ್ಲಿ ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ಸಹಯೋಗದಲ್ಲಿ ಸುಬ್ರಹ್ಮಣ್ಯದ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನ ಬೆಳ್ಳಿಹಬ್ಬ ಸಭಾಂಗಣದಲ್ಲಿ ಜುಲೈ 9ನೇ ಗುರುವಾರದಂದು ಪತ್ರಿಕಾ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ.







 

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಹರೀಶ್ ಎಸ್. ಇಂಜಾಡಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.  ಕಡಬ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಎಸ್.ಬಾಲಕೃಷ್ಣ ಕೊಯಿಲ ಅಧ್ಯಕ್ಷತೆ ವಹಿಸಲಿದ್ದಾರೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ಮಂಗಳೂರಿನ ದಾಯ್ಜಿ ವರ್ಲ್ಡ್ ನ್ಯೂಸ್ ಮುಖ್ಯಸ್ಥ ವಾಲ್ಟರ್ ನಂದಳಿಕೆ, ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿಣಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ, ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಪುಷ್ಪರಾಜ್ ಬಿ.ಎನ್., ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನ ಪ್ರಿನ್ಸಿಪಾಲ್ ಸೋಮಶೇಖರ ನಾಯಕ್ ಅತಿಥಿಗಳಾಗಿ  ಭಾಗವಹಿಸಲಿದ್ದಾರೆ.






 

ಈ ಸಂದರ್ಭದಲ್ಲಿ ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ, ಹಿರಿಯ ಪತ್ರಕರ್ತ ಪಿ.ಬಿ.ಹರೀಶ್ ರೈ ಹಾಗೂ ಸುಬ್ರಹ್ಮಣ್ಯದ ಹಿರಿಯ ಪತ್ರಿಕಾ ವಿತರಕ ಬಸವರಾಜ್ ಅವರನ್ನು ಸನ್ಮಾನಿಸಿ ಗೌರವಿಸಲಾಗುವುದು. ಬಳಿಕ ವಾಲ್ಟರ್ ನಂದಳಿಕೆ ಅವರು ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

error: Content is protected !!
Scroll to Top