ಮಕ್ಕಳಿಗೆ ಹೊಡೆದು ಪಾಠ ಕಲಿಸುವ ಅಗತ್ಯವಿಲ್ಲ: ಶಿಕ್ಷಕಿಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಕಟು ಕರಾರು



(ನ್ಯೂಸ್‌ ಕಡಬ) newskadaba.com,  ಜು.08 : ಯುಕೆಜಿ ವಿದ್ಯಾರ್ಥಿನಿಗೆ ಬೆತ್ತದಿಂದ ಹೊಡೆದ ಆರೋಪ ಎದುರಿಸುತ್ತಿರುವ ಶಿಕ್ಷಕಿಯೊಬ್ಬರ ವಿರುದ್ಧದ ಕಾನೂನು ವಿಚಾರಣೆಗೆ ತಡೆ ನೀಡಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. ಅಲ್ಲದೆ, “ಶಿಕ್ಷಕರು ಮಕ್ಕಳಿಗೆ ಹೊಡೆದು ಪಾಠ ಕಲಿಸುವ ಅಗತ್ಯವಿಲ್ಲ ಮತ್ತು ಇಂತಹ ನಡವಳಿಕೆಯನ್ನು ನ್ಯಾಯಾಲಯ ಸಹಿಸುವುದಿಲ್ಲ” ಎಂದು ಕಟುವಾಗಿ ಹೇಳಿದೆ.







ಮಂಗಳೂರಿನ ಸುರತ್ಕಲ್‌ನ ಹೋಲಿ ಫ್ಯಾಮಿಲಿ ಶಾಲೆಯ ಶಿಕ್ಷಕಿ ಆಶಾ ಕ್ರಾಸ್ತಾ ಅವರು 6 ವರ್ಷದ ಮಗುವಿಗೆ ಬೆತ್ತದಿಂದ ಹಲ್ಲೆ ನಡೆಸಿದ್ದಾರೆ ಎಂದು ಮಗುವಿನ ತಾಯಿ ಪೊಲೀಸರಿಗೆ ದೂರು ನೀಡಿದ್ದರು.ಮಂಗಳೂರಿನ 2ನೇ ಜೆಎಂಎಫ್‌ಸಿ ಕೋರ್ಟ್‌ನಲ್ಲಿ ನಡೆಯುತ್ತಿರುವ ಈ ವಿಚಾರಣೆಯನ್ನು ರದ್ದುಗೊಳಿಸುವಂತೆ ಕೋರಿ ಶಿಕ್ಷಕಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.






ಅರ್ಜಿಯನ್ನು ಪರಿಶೀಲಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ವಿಚಾರಣೆಗೆ ತಡೆ ನೀಡಲು ನಿರಾಕರಿಸಿದ್ದು, ಶಿಸ್ತಿನ ಹೆಸರಿನಲ್ಲಿ ಮಕ್ಕಳ ಮೇಲಿನ ದೈಹಿಕ ಹಲ್ಲೆಯನ್ನು ಒಪ್ಪಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.

error: Content is protected !!
Scroll to Top