(ನ್ಯೂಸ್ ಕಡಬ) newskadaba.com, ಜು.08 ಬೆಸ್ಕಾಂ ವ್ಯಾಪ್ತಿಯ ಗೃಹ ಜ್ಯೋತಿ ಫಲಾನುಭವಿಗಳ ಮನೆ-ಮನೆ ಪರಿಶೀಲನೆ ಕಾರ್ಯಕ್ಕಾಗಿ ಮೀಟರ್ ರೀಡರ್‌ಗಳನ್ನು ನಿಯೋಜಿಸಲಾಗಿದೆ. ಹೀಗಾಗಿ, ಜುಲೈ ತಿಂಗಳಿನಲ್ಲಿ ನಿಯಮಿತ ಮೀಟರ್ ರೀಡಿಂಗ್ ಇರುವುದಿಲ್ಲ ಮತ್ತು ಗ್ರಾಹಕರಿಗೆ ಸರಾಸರಿ ಬಿಲ್ (Average Bill) ನೀಡಲಾಗುವುದು ಎಂದು ಬೆಸ್ಕಾಂ ಪ್ರಕಟಿಸಿದೆ.
ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ ತಿಂಗಳ ಬಿಲ್ ಸಿದ್ಧಪಡಿಸಲಾಗುತ್ತದೆ.ಜುಲೈ ತಿಂಗಳ ಸರಾಸರಿ ಬಿಲ್‌ಗಳನ್ನು ಗ್ರಾಹಕರಿಗೆ ಎಸ್‌ಎಂಎಸ್ (SMS) ಮತ್ತು ಇಮೇಲ್ ಮೂಲಕ ಕಳುಹಿಸಲಾಗುವುದು.ಸರಾಸರಿ ಬಿಲ್ಲಿಂಗ್ ಅವಧಿಯಲ್ಲಿನ ವ್ಯತ್ಯಾಸದ ಯೂನಿಟ್‌ಗಳನ್ನು, ಆಗಸ್ಟ್‌ನಿಂದ ನೈಜ ಮೀಟರ್ ರೀಡಿಂಗ್ ಆರಂಭವಾದ ಬಳಿಕ ಮುಂದಿನ ಬಿಲ್‌ಗಳಲ್ಲಿ ಸೂಕ್ತವಾಗಿ ಹೊಂದಾಣಿಕೆ (Adjust) ಮಾಡಲಾಗುತ್ತದೆ.
ಎಂದಿನಂತೆ ಬೆಸ್ಕಾಂ ಕೌಂಟರ್‌ಗಳು, ವೆಬ್‌ಸೈಟ್, ಬೆಸ್ಕಾಂ ಮಿತ್ರ ಆಪ್ ಹಾಗೂ ಥರ್ಡ್ ಪಾರ್ಟಿ ಆಪ್‌ಗಳ ಮೂಲಕ ಬಿಲ್ ಪಾವತಿಸಬಹುದು.ಎಚ್‌ಟಿ ಗ್ರಾಹಕರು, 40 HP ಹಾಗೂ ಅದಕ್ಕಿಂತ ಹೆಚ್ಚಿನ ಲೋಡ್ ಹೊಂದಿರುವ ಎಲ್‌ಟಿ ಗ್ರಾಹಕರು, ಸೋಲಾರ್ ರೂಫ್‌ಟಾಪ್ (SRTPV) ಗ್ರಾಹಕರು ಮತ್ತು ತಾತ್ಕಾಲಿಕ ವಿದ್ಯುತ್ ಸಂಪರ್ಕ ಹೊಂದಿರುವವರಿಗೆ ನೈಜ ಮೀಟರ್ ರೀಡಿಂಗ್ ಆಧಾರದ ಮೇಲೆಯೇ ಬಿಲ್ ನೀಡಲಾಗುತ್ತದೆ.









