ಇಂದು ರಫ್ತು ಜಾಗೃತಿ ಕಾರ್ಯಕ್ರಮ



(ನ್ಯೂಸ್ ಕಡಬ) newskadaba.com ಜು. 10. ಡಿ.ಜಿ.ಎಫ್.ಟಿ (DGFT), ಎಫ್.ಐ.ಇ.ಒ (FIEO) ಮತ್ತು ಜಿಲ್ಲಾ ಕೈಗಾರಿಕಾ ಕೇಂದ್ರದ ಸಹಯೋಗದಲ್ಲಿ ಡಿಸ್ಟ್ರಿಕ್ಟ್ಸ್  ಆ್ಯಸ್ ಎಕ್ಸ್‍ಪೋರ್ಟ್ ಹಬ್ಸ್ ಇನಿಶಿಯೇಟಿವ್ ಬಗ್ಗೆ ಕಾರ್ಯಗಾರ ಜುಲೈ 10ರಂದು ಬೆಳಿಗ್ಗೆ 10:30 ಗಂಟೆಗೆ ಬೈಕಂಪಾಡಿ ಕೈಗಾರಿಕಾ ಪ್ರದೇಶದ ಕೆನರಾ ಇಂಡಸ್ಟ್ರೀಸ್ ಅಸೋಸಿಯೇಷನ್‍ನಲ್ಲಿ ಆಯೋಜಿಸಲಾಗಿದೆ.
ಈ ಕಾರ್ಯಕ್ರಮದಲ್ಲಿ ರಫ್ತು ವ್ಯವಹಾರ ಆರಂಭಿಸುವ ವಿಧಾನ, ಅಂತರಾಷ್ಟ್ರೀಯ ಮಾರುಕಟ್ಟೆಯ ಅವಕಾಶಗಳು, ಅಗತ್ಯ ನೋಂದಣಿಗಳು, ಸರ್ಕಾರದ ಯೋಜನೆಗಳು ಹಾಗೂ ರಫ್ತು ಪ್ರಕ್ರಿಯೆಗಳ ಕುರಿತು ತಜ್ಞರು ಸಮಗ್ರ ಮಾಹಿತಿ ನೀಡಲಿದ್ದಾರೆ.
ರಫ್ತು ವಿಭಾಗದಲ್ಲಿ ಹೊಸ ಅವಕಾಶಗಳನ್ನು ಅರಸುತ್ತಿರುವ ಉದ್ಯಮಿಗಳು, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಪ್ರತಿನಿಧಿಗಳು ಹಾಗೂ ಆಸಕ್ತರು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬಹುದು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು
ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







error: Content is protected !!
Scroll to Top