ವಯನಾಡು ಭೂಕುಸಿತ: ಮೃತರ ಸಂಖ್ಯೆ 6ಕ್ಕೆ ಏರಿಕೆ; ಮೂರು ಶವಗಳ ಪತ್ತೆ



(ನ್ಯೂಸ್‌ ಕಡಬ) newskadaba.com,  ಜು.10 : ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಗುರುವಾರ ಶೋಧ ಕಾರ್ಯಾಚರಣೆಯ ವೇಳೆ ದುರಂತದ ಸ್ಥಳ ಹಾಗೂ ಸಮೀಪದ ನದಿಯಿಂದ ಒಟ್ಟು ಮೂರು ಮೃತದೇಹಗಳನ್ನು ಹೊರತೆಗೆಯಲಾಗಿದೆ.







ಮೃತದೇಹಗಳನ್ನು ಉತ್ತರ ಪ್ರದೇಶದ ಸರ್ವೇಯರ್ ಅಜರುದ್ದೀನ್ ಅನ್ಸಾರಿ, ಹಿಮಾಚಲ ಪ್ರದೇಶದ ಎಂಜಿನಿಯರ್ ರಾಹುಲ್ ಶರ್ಮಾ ಹಾಗೂ ಬಿಹಾರದ ಆಪರೇಟರ್ ಮೊಹಮ್ಮದ್ ಇಮ್ರಾನ್ ಎಂದು ಗುರುತಿಸಲಾಗಿದೆ.






ಸದ್ಯ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ವೈತಿರಿ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದ್ದು, ಬಳಿಕ ಕೋಝಿಕ್ಕೋಡ್ ಸರ್ಕಾರಿ ವೈದ್ಯಕೀಯ ಆಸ್ಪತ್ರೆಯಲ್ಲಿ ಇಡಲಾಗುವುದು. ಸಚಿವರಾದ ಎ.ಪಿ.ಅನಿಲ್ ಕುಮಾರ್ ಮತ್ತು ಟಿ.ಸಿದ್ದಿಕ್ ನೇತೃತ್ವದಲ್ಲಿ ದುರಂತ ವಲಯಗಳು ಹಾಗೂ ನದಿಯ ಆಸುಪಾಸಿನಲ್ಲಿ ಶೋಧ ಕಾರ್ಯವನ್ನು ಮತ್ತಷ್ಟು ತೀವ್ರಗೊಳಿಸಲಾಗಿದೆ.

error: Content is protected !!
Scroll to Top