(ನ್ಯೂಸ್ ಕಡಬ) newskadaba.com, ಜು.10 : ಉಡುಪಿ ಜಿಲ್ಲೆಯ ಮಣಿಪಾಲ್ ಸಮೀಪದ ಕೊಡಂಗೆ ಪ್ರದೇಶದಲ್ಲಿ ಶಾಲಾ ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂದಕಕ್ಕೆ ಉರುಳಿ ಬಿದ್ದಿದೆ.ಅಪಘಾತದಲ್ಲಿ ಓರ್ವ ವಿದ್ಯಾರ್ಥಿಯ ತಲೆಗೆ ತೀವ್ರ ಪೆಟ್ಟಾಗಿದ್ದು, ಪರಿಸ್ಥಿತಿ ಗಂಭೀರವಾಗಿದೆ. ಇನ್ನುಳಿದ 7 ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ.
ಬಸ್ ಉರುಳುವ ಸಮಯದಲ್ಲಿ ರಸ್ತೆಯ ಮತ್ತೊಂದು ಬದಿಯಲ್ಲಿ ನಿಂತಿದ್ದ ಕೆಲವು ಶಾಲಾ ಮಕ್ಕಳು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು ಮತ್ತು ಶಾಲಾ ಸಿಬ್ಬಂದಿ ತಕ್ಷಣವೇ ಧಾವಿಸಿ, ಮಕ್ಕಳನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸುವಲ್ಲಿ ನೆರವಾಗಿದ್ದಾರೆ.
ಘಟನಾ ಸ್ಥಳಕ್ಕೆ ಮಣಿಪಾಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತಕ್ಕೆ ನಿಖರ ಕಾರಣ ಏನೆಂಬುದರ ಕುರಿತು ತನಿಖೆ ಕೈಗೊಂಡಿದ್ದಾರೆ.









