(ನ್ಯೂಸ್ ಕಡಬ) newskadaba.com, ಜು.10: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ವ್ಯಾಪಕ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪ್ರಮುಖವಾಗಿ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಹೈ-ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳು ಹಾಗೂ ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ.ಸಾರ್ವಜನಿಕರು ಹಾಗೂ ಪ್ರವಾಸಿಗರು ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.









