(ನ್ಯೂಸ್ ಕಡಬ) newskadaba.com, ಜು.10: ಮಂಗಳೂರು-ವಿಟ್ಲ ಮಾರ್ಗದ ಖಾಸಗಿ ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಸ್ ಕಂಡಕ್ಟರ್‌ನನ್ನು ಪೊಲೀಸರು ದಸ್ತಗಿರಿ ಮಾಡಿದ್ದಾರೆ.ಬಂಧಿತ ಆರೋಪಿಯನ್ನು ಉಪ್ಪಿನಂಗಡಿಯ ಕರ್ವೇಲು ನಿವಾಸಿ ಇರ್ಫಾನ್ (32) ಎಂದು ಗುರುತಿಸಲಾಗಿದೆ.
ಜುಲೈ 9 ರಂದು ಸಂಜೆ ಸುಮಾರು 5:00 ಗಂಟೆಗೆ ಬಸ್ಸಿನಲ್ಲಿ ವಿದ್ಯಾರ್ಥಿನಿಯರನ್ನು ಗುರಿಯಾಗಿಸಿಕೊಂಡು ಅಸಭ್ಯವಾಗಿ ವರ್ತಿಸಿ, ಅಶ್ಲೀಲ ಸನ್ನೆಗಳನ್ನು ಮಾಡಿದ್ದಲ್ಲದೆ, ಹಿಂದಿನ ಸೀಟಿಗೆ ಬರುವಂತೆ ಕರೆದು ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ.
ಈ ಕುರಿತು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಜುಲೈ 10 ರಂದು ಆರೋಪಿಯನ್ನು ಬಂಧಿಸಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.








