2027ನೇ ಸಾಲಿನ ಪ್ರದ್ಮಶ್ರೇಣಿ ಪ್ರಶಸ್ತಿಗಳಿಗೆ ಹೆಸರುಗಳ ಶಿಫಾರಸ್ಸಿಗೆ ಆಹ್ವಾನ



(ನ್ಯೂಸ್ ಕಡಬ) newskadaba.com ಜು. 11. ಸಮಾಜದ ಯಾವುದೇ ಕ್ಷೇತ್ರಗಳಲ್ಲಿ ಅಂದರೆ ಕಲೆ, ಸಾಹಿತ್ಯ ಮತ್ತು ಶಿಕ್ಷಣ, ಕ್ರೀಡೆ, ವೈದ್ಯಕೀಯ, ಸಮಾಜ ಸೇವೆ, ವಿಜ್ಞಾನ ಮತ್ತು ಇಂಜಿನಿಯರಿಂಗ್, ಸಾರ್ವಜನಿಕ ವ್ಯವಹಾರಗಳು, ನಾಗರೀಕ ಸೇವೆ, ವ್ಯಾಪಾರ ಮತ್ತು ಕೈಗಾರಿಕೆ, ಇತ್ಯಾದಿಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ 2027ನೇ ಸಾಲಿನ ಪ್ರದ್ಮಶ್ರೇಣಿಯ ಪ್ರಶಸ್ತಿಗಳಾದ ಪದ್ಮ ವಿಭೂಷಣ, ಪದ್ಮ ಭೂಷಣ ಮತ್ತು ಪದ್ಮಶ್ರೀ ಪ್ರಶಸ್ತಿಗಳನ್ನು ಗಣರಾಜ್ಯೋತ್ಸವ ದಿನದ ಹಿಂದಿನ ದಿನದಂದು ಕೇಂದ್ರ ಸರ್ಕಾರದಿಂದ ಪ್ರಕಟಿಸಲಾಗುತ್ತದೆ.
2027 ಸಾಲಿನ ಪದ್ಮಶ್ರೀ ಪ್ರಶಸ್ತಿಗೆ ನಾಮ ನಿರ್ದೇಶನಗಳನ್ನು ಆನ್‍’ಲೈನ್ ಮೂಲಕ ಸಲ್ಲಿಸಲು (https://padmaawards.gov.in) ಅರ್ಹ ಹೆಸರುಗಳನ್ನು ಶಿಫಾರಸ್ಸು ಮಾಡಬೇಕು.







ಮೇಲೆ ಸೂಚಿಸಿದ ಕ್ಷೇತ್ರಗಳಲ್ಲಿ ನೀಡಬಹುದಾದ ಪದ್ಮಶ್ರೇಣಿ ಪ್ರಶಸ್ತಿಗಳಿಗೆ ಸಂಬಂಧಿಸಿದ ಶಿಫಾರಸ್ಸಿನ ಪ್ರಸ್ತಾವನೆಗಳನ್ನು ಸಲ್ಲಿಸುವ ಪ್ರಕ್ರಿಯೆಯು ಜುಲೈ 31 ರಂದು ಮುಕ್ತಾಯಗೊಳ್ಳುತ್ತದೆ ಎಂದು ಕೇಂದ್ರ ಸರ್ಕಾರವು ತಿಳಿಸಿದ್ದು, ರಾಜ್ಯ ಸರ್ಕಾರವು ಪ್ರಸ್ತಾವನೆಗಳನ್ನು ಪರಿಶೀಲಿಸಿ ಜುಲೈ 31 ರೊಳಗೆ ಕೇಂದ್ರ ಸರ್ಕಾರಕ್ಕೆ, ಆನ್‍ ಲೈನ್ ಮೂಲಕ ಮಾತ್ರ ಕಳುಹಿಸಬೇಕಾಗಿರುವುದರಿಂದ ಪ್ರಸ್ತಾವನೆಗಳನ್ನು ಜುಲೈ 15 ರೊಳಗೆ ಸರ್ಕಾರಕ್ಕೆ ಸಲ್ಲಿಸಬೇಕಿರುತ್ತದೆ. ಆದ್ದರಿಂದ ಅರ್ಹ ವ್ಯಕ್ತಿಗಳ ನಾಮ ನಿರ್ದೇಶನಗಳನ್ನು ನಿಗದಿತ ನಮೂನೆಯಲ್ಲಿ  ಜುಲೈ 12 ರೊಳಗೆ  ಜಿಲ್ಲಾಧಿಕಾರಿ ಕಛೇರಿಗೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.






error: Content is protected !!
Scroll to Top