ಭಾರೀ ಗಾಳಿ‌-ಮಳೆಗೆ ತತ್ತರಿಸಿದ ಕರಾವಳಿ ► ಮಂಗಳೂರು ನಗರ ಪ್ರದೇಶ ಜಲಾವೃತ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.29. ರಾಜ್ಯಕ್ಕೆ ಮುಂಗಾರು ಕಾಲಿಟ್ಟಿದ್ದು, ವಾಯುಭಾರ ಕುಸಿತಗೊಂಡು ಕರಾವಳಿಯಾದ್ಯಂತ ಮಂಗಳವಾರ ಬೆಳಿಗ್ಗೆಯಿಂದಲೇ ಭಾರೀ ಮಳೆಯಾಗಿದೆ.

ಚರಂಡಿಗಳಲ್ಲಿ ಹೂಳು ತುಂಬಿಕೊಂಡಿರುವುದರಿಂದ ಮಂಗಳೂರು ನಗರ ಪ್ರದೇಶಗಳಲ್ಲಿ ಕೃತಕ‌ ನೆರೆಯಾಗಿದ್ದು, ಪಾದಚಾರಿಗಳು, ವಾಹನ ಸವಾರರು ತೀವ್ರ ತೊಂದರೆಗೊಳಗಾಗಿದ್ದಾರೆ‌. ನಗರದ ವಿವಿಧ ಪ್ರದೇಶಗಳಲ್ಲಿ ಹಲವು ಮನೆಗಳಿಗೆ, ಅಂಗಡಿಗಳ ಒಳಗೆ ನೀರು ನುಗ್ಗಿದ್ದು, ಸಾರ್ವಜನಿಕರು ಸಂಕಷ್ಟಕ್ಕೊಳಗಾಗಿದ್ದಾರೆ. ಮುಖ್ಯ ರಸ್ತೆಯಲ್ಲಿ ಸಂಚರಿಸಲಾಗದಂತಹ ಪರಿಸ್ಥಿತಿ ತಲೆದೋರಿದ್ದು, ನಗರ ಪ್ರದೇಶಗಳಲ್ಲಿ ವಾಹನ ಸಂಚಾರದಲ್ಲಿ ವ್ಯತ್ಯವುಂಟಾಗಿದೆ.

error: Content is protected !!
Scroll to Top