(ನ್ಯೂಸ್ ಕಡಬ) newskadaba.com, ಜು.13 ನೇಪಾಳದಲ್ಲಿ ಹೋಟೆಲ್ ಕೆಲಸದಲ್ಲಿದ್ದ ಬೆಳಗಾವಿ ಜಿಲ್ಲೆಯ ಖಾನಾಪುರ ಪಟ್ಟಣದ ನಿವಾಸಿ ಸಾಹಿಲ್ ರಿಯಾಜ್ ಅಹ್ಮದ್ ಮೋಮಿನ್ (25) ಎಂಬ ಯುವಕನನ್ನು ಆತನ ರೂಮ್‌ಮೇಟ್ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ.
ಮೃತನ ಶವವನ್ನು ಭಾರತಕ್ಕೆ ಮರಳಿ ತರಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಯುವಕನ ಕುಟುಂಬಸ್ಥರು ಸರ್ಕಾರ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಕಣ್ಣೀರಿನ ಮನವಿ ಮಾಡಿದ್ದಾರೆ.













