ಮಹಿಳಾ ಪಾಲಿಟೆಕ್ನಿಕ್: ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ



(ನ್ಯೂಸ್ ಕಡಬ) newskadaba.com ಜು. 13. 2026-2027ನೇ ಸಾಲಿನಲ್ಲಿ ತಾಂತ್ರಿಕ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಬೊಂದೇಲ್ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ನಲ್ಲಿ ಡಿಪ್ಲೊಮಾ ಪ್ರವೇಶಕ್ಕೆ ಇಲೆಕ್ಟ್ರಾನಿಕ್ಸ್  ಆ್ಯಂಡ್ ಕಮ್ಯೂನಿಕೇಶನ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್, ಕಮರ್ಷಿಯಲ್ ಪ್ರಾಕ್ಟೀಸ್ (ಇಂಗ್ಲೀಷ್ ಮತ್ತು ಕನ್ನಡ) ಹಾಗೂ ಲೈಬ್ರೆರಿ ಆ್ಯಂಡ್ ಇನ್ ಫಾರ್ಮೇಶನ್ ಸೈನ್ಸ್ ಕೋರ್ಸ್ ಗಳಿಗೆ ಸೇರಲು ಎಸ್.ಎಸ್.ಎಲ್.ಸಿ/ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಡಿಪ್ಲೊಮಾ ಕೋರ್ಸ್ ಸೇರಲು ಇಚ್ಛಿಸುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
     







ಅರ್ಜಿ ಸಲ್ಲಿಸಲು ಆಸಕ್ತಿಯುಳ್ಳ ವಿದ್ಯಾರ್ಥಿಗಳು ಬೊಂದೇಲ್ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಸಂಪರ್ಕಿಸಿ, ನೇರವಾಗಿ ಅರ್ಜಿ ಸಲ್ಲಿಸಿ ಪ್ರವೇಶ ಪಡೆಯಬಹುದು. ಅರ್ಜಿ ಪಡೆಯಲು ಹಾಗೂ ಭರ್ತಿ ಮಾಡಿದ ಅರ್ಜಿಯನ್ನು ಸಲ್ಲಿಸಲು ಕೊನೆಯ ಜುಲೈ 31.
     






ಹೆಚ್ಚಿನ ಮಾಹಿತಿಗೆ ಕಛೇರಿಯ ದೂರವಾಣಿ ಸಂಖ್ಯೆ 0824-2482334/ 9611320910/ 9844744845 ಸಂಪರ್ಕಿಸಬಹುದು ಎಂದು  ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!
Scroll to Top