ಮೀನುಗಾರಿಕೆಗೆ ತೆರಳಿದ್ದ ಬೋಟ್ ಮಗುಚಿ ಇಬ್ಬರು ಕಣ್ಮರೆ ► ನಾಲ್ವರ ರಕ್ಷಿಸಿದ ಕೋಸ್ಟ್ ಗಾರ್ಡ್ ಸಿಬ್ಬಂದಿಗಳು

ಸಾಂದರ್ಭಿಕ ಚಿತ್ರ

(ನ್ಯೂಸ್ ಕಡಬ) newskadaba.com ಕಾರವಾರ, ಮೇ.29. ಮೀನುಗಾರಿಕೆಗೆ ತೆರಳಿದ್ದ ಬೋಟೊಂದು ಮಗುಚಿದ ಪರಿಣಾಮ ಇಬ್ಬರು ನೀರುಪಾಲಾದ ಘಟನೆ ಹೊನ್ನಾವರದಲ್ಲಿ ಮಂಗಳವಾರದಂದು ನಡೆದಿದೆ.

ತಮಿಳುನಾಡು ಮೂಲದ ಬೋಟ್ ನಲ್ಲಿ ಆರು ಜನರಿದ್ದು, ಮೀನುಗಾರಿಕೆಗೆಂದು ತೆರಳಿದ್ದ ವೇಳೆ ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ಬೋಟ್ ಮಗುಚಿ ಬಿದ್ದಿದೆ. ಬೋಟ್ ನಲ್ಲಿದ್ದ ನಾಲ್ವರನ್ನು ಕೋಸ್ಟ್ ಗಾರ್ಡ್ ಸಿಬ್ಬಂದಿಗಳು ರಕ್ಷಿಸಿದ್ದಾರೆ. ಇಬ್ಬರು ಕಣ್ಮರೆಯಾಗಿದ್ದು, ಕಾರವಾರ ಹಾಗೂ ಮಂಗಳೂರು ಕೋಸ್ಟ್ ಗಾರ್ಡ್ ಸಿಬ್ಬಂದಿಗಳು ಕಣ್ಮರೆಯಾದವರ ಶೋಧ ಕಾರ್ಯ ಮುಂದುವರಿಸಿದ್ದಾರೆ.

Scroll to Top