(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.29. ಕರಾವಳಿಯಲ್ಲಿ ಭಾರೀ ಗಾಳಿ – ಮಳೆಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ಮಂಗಳವಾರ ಮತ್ತು ಬುಧವಾರದಂದು ರಜೆ ಘೋಷಿಸಲಾಗಿದೆ.
ಕರಾವಳಿಯ ತಗ್ಗು ಪ್ರದೇಶಗಳು ಜಲಾವೃತವಾಗಿರುವುದರಿಂದ ಪರಿಸರದಲ್ಲಿ ಆತಂಕದ ಸ್ಥಿತಿ ನಿರ್ಮಾಣವಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.