(ನ್ಯೂಸ್ ಕಡಬ) newskadaba.com, ಜು.14 : ಕರ್ನಾಟಕ ರಾಜ್ಯ ಸರ್ಕಾರವು ನಾಗರಿಕರಿಗೆ ಮಹತ್ವದ ಯೋಜನೆಯೊಂದನ್ನು ಪ್ರಕಟಿಸಿದ್ದು, ಶಾಶ್ವತ ನಿವಾಸ ಪ್ರಮಾಣ ಪತ್ರ ಪಡೆಯಲು ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಿದೆ. ಜುಲೈ 16ರಿಂದಲೇ ಈ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ ಎಂದು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರ ಕಠಾರಿಯಾ ಅವರು ಮಾಹಿತಿ ನೀಡಿದ್ದಾರೆ.
ಈ ಕುರಿತಾದ ಸಂಪೂರ್ಣ ವಿವರಗಳು, ಅರ್ಜಿ ಸಲ್ಲಿಕೆ ವಿಧಾನ ಮತ್ತು ಪ್ರಮುಖ ನಿಯಮಗಳು ಈ ಕೆಳಗಿನಂತಿವೆ:
ಜುಲೈ 16ರಿಂದ ಪ್ರಕ್ರಿಯೆ ಜಾರಿಗೆ ಬರಲಿದೆ.ಸಾರ್ವಜನಿಕರು ಆನ್ಲೈನ್ ಮತ್ತು ಆಫ್ಲೈನ್ ಎರಡೂ ಮಾಧ್ಯಮಗಳ ಮೂಲಕ ಅರ್ಜಿ ಸಲ್ಲಿಸಬಹುದು.ಈ ಪ್ರಮಾಣ ಪತ್ರವನ್ನು ಪಡೆಯಲು ಸಾರ್ವಜನಿಕರು ಯಾವುದೇ ರೀತಿಯ ಅರ್ಜಿ ಶುಲ್ಕ ಪಾವತಿಸುವ ಅಗತ್ಯವಿರುವುದಿಲ್ಲ. ಸಂಪೂರ್ಣ ಸೇವೆ ಉಚಿತವಾಗಿದೆ.
ಅರ್ಜಿ ಸಲ್ಲಿಸಿದ 21 ದಿನಗಳ ಒಳಗಾಗಿ ಅಧಿಕಾರಿಗಳು ಪರಿಶೀಲನೆ ನಡೆಸಿ ಅರ್ಹ ನಾಗರಿಕರಿಗೆ ಪ್ರಮಾಣ ಪತ್ರವನ್ನು ವಿತರಿಸಲಿದ್ದಾರೆ.
ಸಾರ್ವಜನಿಕರ ಅನುಕೂಲಕ್ಕಾಗಿ ಸರ್ಕಾರವು ಆನ್ಲೈನ್ ವ್ಯವಸ್ಥೆಯನ್ನು ಅತ್ಯಂತ ಸುಲಭಗೊಳಿಸಿದೆ:ಅಭ್ಯರ್ಥಿಗಳು ಸರ್ಕಾರದ ಅಧಿಕೃತ ಸೇವಾ ಸಿಂಧು ಪೋರ್ಟಲ್ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು.ಇದಕ್ಕಾಗಿ ಪ್ರತ್ಯೇಕ ಮೊಬೈಲ್ ಅಪ್ಲಿಕೇಶನ್ ಒಂದನ್ನು ಸಿದ್ಧಪಡಿಸಲಾಗಿದ್ದು, ಅದರ ಮೂಲಕವೂ ಸುಲಭವಾಗಿ ಅಪ್ಲೈ ಮಾಡಬಹುದು.
ಆನ್ಲೈನ್ ಸೌಲಭ್ಯವಿಲ್ಲದವರು ನಿಯಮಿತ ಸರ್ಕಾರಿ ಕಚೇರಿಗಳು ಅಥವಾ ಸೇವಾ ಕೇಂದ್ರಗಳ ಮೂಲಕ ಆಫ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ.ಅರ್ಜಿ ಸಲ್ಲಿಸಿದ ನಂತರದ ಪ್ರಕ್ರಿಯೆಗಳ ಕುರಿತು ಕಂದಾಯ ಇಲಾಖೆ ಸ್ಪಷ್ಟ ಸೂಚನೆ ನೀಡಿದೆ:









