ಕೆಪಿಎಸ್.ಸಿ ಮತ್ತು ಕೆಇಎ ಪರೀಕ್ಷೆಗಳಿಗೆ ತರಬೇತಿ

(ನ್ಯೂಸ್ ಕಡಬ) newskadaba.com ಜು. 15. ಕರ್ನಾಟಕ ಸರ್ಕಾರವು ಕರ್ನಾಟಕ ಲೋಕ ಸೇವಾ ಆಯೋಗ (KPSC) ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ (KEA) ನಡೆಸಲಿರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ 50 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಛೇರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ.

ಆಸಕ್ತರು ಜುಲೈ 21 ರೊಳಗಾಗಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4.30 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು 0821-2515944 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Scroll to Top