ಕಡಬ: ವರದಕ್ಷಿಣೆ ತರುವಂತೆ ಕಿರುಕುಳ ► ಪತಿ, ಸಂಬಂಧಿಕರ ವಿರುದ್ಧ ದೂರು

(ನ್ಯೂಸ್ ಕಡಬ) newskadaba.com
ಕಡಬ, ಮೇ.28. ವರದಕ್ಷಿಣೆ ನೀಡುವಂತೆ ಆಗ್ರಹಿಸಿ ತನ್ನ ಪತಿ ಮತ್ತು ಮನೆಯವರು ದೈಹಿಕ ಹಾಗೂ ಮಾನಸಿಕ ಹಿಂಸೆ ನೀಡುತ್ತಿದ್ದಾರೆ‌ ಎಂದು ಆರೋಪಿಸಿ ಮಹಿಳೆಯೋರ್ವರು ಕಡಬ ಠಾಣೆಗೆ ದೂರು‌ ನೀಡಿದ್ದಾರೆ.

ಇಲ್ಲಿನ ಕೋಡಿಂಬಾಳ ಗ್ರಾಮದ ಹಳೆಸ್ಟೇಷನ್ ನಿವಾಸಿ ಸಕೀನಾ ಎಂಬವರನ್ನು ಕಳೆದ ಫೆಬ್ರವರಿಯಲ್ಲಿ ಕಾಸರಗೋಡು ಜಿಲ್ಲೆಯ ಉದುಮ ನಿವಾಸಿ ಅಹ್ಮದ್ ಶಕೀಬ್ ಎಂಬುವವರಿಗೆ ಮದುವೆ ಮಾಡಿಕೊಡಲಾಗಿತ್ತು. ಆ ನಂತರದ ದಿನಗಳಲ್ಲಿ ತನ್ನ ಗಂಡ, ಮಾವ ಅಹಮ್ಮದ್ ಸತ್ತಾರ್ ಹಾಗೂ ಅತ್ತೆ ಬೀಬಿಯವರು ಜೊತೆ ಸೇರಿ ಹೆಚ್ಚಿನ ವರದಕ್ಷಿಣೆ ತರುವಂತೆ ಪೀಡಿಸುತ್ತಿರುವುದಲ್ಲದೆ, ದೈಹಿಕ ಹಾಗೂ ಮಾನಸಿಕವಾಗಿ ಹಿಂಸಿಸುತ್ತಿದ್ದಾರೆ. ಅಲ್ಲದೆ ಇತ್ತೀಚೆಗೆ ತಾನು ಅಸೌಖ್ಯದ ಕಾರಣದಿಂದ ತವರು ಮನೆಗೆ ಆಗಮಿಸಿದ್ದು, ಅಲ್ಲಿಗೂ ಬಂದ ಗಂಡ ಮಾರಕಾಯುಧಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ಕಡಬ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಮಹಿಳೆ ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡ ಕಡಬ ಪೊಲೀಸರು ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ.

Also Read  ಪುತ್ತೂರು: ನಿರ್ಮಾಣ ಹಂತದ ಕಟ್ಟಡದ ಮೇಲೆ ಗುಡ್ಡ ಕುಸಿತ ► ಇಬ್ಬರು ಮೃತ್ಯು, ಹಲವರಿಗೆ ಗಾಯ

error: Content is protected !!
Scroll to Top