(ನ್ಯೂಸ್ ಕಡಬ) newsksdaba.com ಉಪ್ಪಿನಂಗಡಿ, ಜು. 15. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಪೆರಿಯಡ್ಕದ ಬೊಳ್ಳಾವು ಎಂಬಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಯೋಗೀಶ್ ಯಾನೆ ಸಂಕೇತ್ ಎಂದು ಗುರುತಿಸಲಾಗಿದೆ. ಕೂಲಿಕಾರ್ಮಿಕನಾಗಿದ್ದ ಈತ ಜುಲೈ 13ರಂದು ರಾತ್ರಿ ವೇಳೆ ಮನೆಯ ಕೋಣೆಯಲ್ಲಿ ನೇಣಿಗೆ ಶರಣಾಗಿದ್ದು, ವಿಷಯ ತಿಳಿದ ಮನೆಯವರು ತಕ್ಷಣವೇ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಈತನನ್ನು ಆಸ್ಪತ್ರೆಗೆ ಸಾಗಿಸಿದರಾದರೂ, ಆಸ್ಪತ್ರೆ ತಲುಪುವಷ್ಟರಲ್ಲೇ ಆತ ಮೃತಪಟ್ಟಿದ್ದಾನೆ ಎನ್ನಲಾಗಿದೆ.
ಕಳೆದ ಎರಡು ವರ್ಷಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಈತನಿಗೆ ಶಿವಮೊಗ್ಗದ ಆಸ್ಪತ್ರೆಯಿಂದ ಚಿಕಿತ್ಸೆ ಕೊಡಿಸಲಾಗುತ್ತಿತ್ತು ಎನ್ನಲಾಗಿದೆ.









