ಭಾರೀ ಮಳೆಯಿಂದಾಗಿ ಹವಾಮಾನದಲ್ಲಿ ಏರುಪೇರು ► ಮಂಗಳೂರಿನಲ್ಲಿ ಇಳಿಸಲು ಅಸಾಧ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಇಳಿದ ವಿಮಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.30. ದುಬೈನಿಂದ ಹಾಗೂ ಮುಂಬಯಿಯಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಎರಡು ವಿಮಾನಗಳನ್ನು ವಿಪರೀತ ಮಳೆಯ ಹಿನ್ನೆಲೆಯಲ್ಲಿ ಬೆಂಗಳೂರು ಹಾಗೂ ಕೇರಳದಲ್ಲಿ ಇಳಿಸಿದ ಘಟನೆ ಮಂಗಳವಾರದಂದು ನಡೆದಿದೆ.

ಮಂಗಳವಾರ ಬೆಳಿಗ್ಗೆಯಿಂದಲೇ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನಗರದ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಹವಾಮಾನ ವೈಪರೀತ್ಯದಿಂದಾಗಿ ವಿಮಾನಗಳನ್ನು ಇಳಿಸಲು ಅಸಾಧ್ಯವಾದ ಕಾರಣ ದುಬೈನಿಂದ ಮಂಗಳೂರಿಗೆ ಬರಬೇಕಾಗಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವನ್ನು ಬೆಂಗಳೂರಿನಲ್ಲಿ ಇಳಿಸಬೇಕಾಯಿತು. ಅಲ್ಲದೆ, ಮುಂಬೈಯಿಂದ ಮಂಗಳೂರಿಗೆ ಬರಬೇಕಾಗಿದ್ದ ಏರ್ ಇಂಡಿಯಾ ವಿಮಾನವನ್ನು ತಿರುವನಂತಪುರಂನಲ್ಲಿ ಇಳಿಸಲಾಗಿದೆ ಎಂದು ತಿಳಿದುಬಂದಿದೆ.

Scroll to Top