ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ► ತಂದೆ, ತಾಯಿ ಹಾಗೂ ಇಬ್ಬರು ಪುತ್ರಿಯರು

(ನ್ಯೂಸ್ ಕಡಬ) newskadaba.com ಉಡುಪಿ, ಜು.13. ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಶಿರ್ವ ಪೊಲೀಸ್ ಠಾಣೆ ವ್ಯಾಪ್ತಿಯ ಪಡುಬೆಲ್ಲೆ ಎಂಬಲ್ಲಿ ಬುಧವಾರ ಬೆಳಗ್ಗೆ ನಡೆದಿದೆ.

ಮೃತರನ್ನು ಕಳೆದ 30 ವರ್ಷಗಳಿಂದ ಪಡುಬೆಲ್ಲೆಯಲ್ಲಿ ಜ್ಯುವೆಲ್ಲರಿ ವ್ಯಾಪಾರ ನಡೆಸುತ್ತಿದ್ದ ಶಂಕರಾಚಾರ್ಯ (50), ಅವರ ಪತ್ನಿ ನಿರ್ಮಲ ಆಚಾರ್ಯ (44), ಮತ್ತು ಪುತ್ರಿಯರಾದ ಶ್ರುತಿ (23) ಹಾಗೂ ಶ್ರೇಯ (22) ಎಂದು ಗುರುತಿಸಲಾಗಿದೆ. ಇಂದು ಬೆಳಿಗ್ಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.

ಮೃತದೇಹಗಳನ್ನು ಮಣಿಪಾಲದ ಶವಾಗಾರದಲ್ಲಿ ಇರಿಸಲಾಗಿದೆ. ಕಾಪು ಶಾಸಕ ವಿನಯ ಕುಮಾರ್ ಸೊರಕೆ, ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Scroll to Top