(ನ್ಯೂಸ್ ಕಡಬ) newskadaba.com ಜು. 17. ರಾಷ್ಟ್ರರಾಜಧಾನಿ ಹೊಸದಿಲ್ಲಿಯ ಐತಿಹಾಸಿಕ ಕೆಂಪುಕೋಟೆ ಸಂಕೀರ್ಣವನ್ನು ಆಗಸ್ಟ್ 15ರ ವರೆಗೆ ಸಾರ್ವಜನಿಕರಿಗೆ ಮುಚ್ಚಲಾಗಿದೆ.
ಕೆಂಪುಕೋಟೆ ಸಂಕೀರ್ಣದಲ್ಲಿ ಸ್ವಾತಂತ್ರ್ಯ ದಿನಾಚರಣೆಗೆ ಪೂರ್ವಸಿದ್ದತೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಈ ಆದೇಶವನ್ನು ಹೊರಡಿಸಿದೆ.
ಪುರಾತನ ಸ್ಮಾರಕಗಳು ಹಾಗೂ ಪುರಾತತ್ವ ತಾಣಗಳು ಮತ್ತು ಪಳೆಯುಳಿಕೆಗಳ ಕಾನೂನುಗಳು, 1959ರ ನಿಯಮ 5ರಡಿ ಪ್ರದತ್ತವಾದ ಅಧಿಕಾರಗಳನ್ನು ಬಳಸಿಕೊಂಡು ಈ ಆದೇಶವನ್ನು ಹೊರಡಿಸಲಾಗಿದೆ ಎಂದು ASI ಪ್ರಕಟಣೆ ತಿಳಿಸಿದೆ.










