ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಆತ್ಮಹತ್ಯೆಗೆ ಯತ್ನಿಸಿದ್ದ ಕಮ್ಯೂನಿಟಿ ಹೆಲ್ತ್ ಆಫೀಸರ್ ಕೊನೆಯುಸಿರು: ಪೊಲೀಸರಿಂದ ತನಿಖೆ ಚುರುಕು – News Kadaba

ಆತ್ಮಹತ್ಯೆಗೆ ಯತ್ನಿಸಿದ್ದ ಕಮ್ಯೂನಿಟಿ ಹೆಲ್ತ್ ಆಫೀಸರ್ ಕೊನೆಯುಸಿರು: ಪೊಲೀಸರಿಂದ ತನಿಖೆ ಚುರುಕು

(ನ್ಯೂಸ್‌ ಕಡಬ) newskadaba.com,  ಜು.18 ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದ ಕಮ್ಯೂನಿಟಿ ಹೆಲ್ತ್ ಆಫೀಸರ್ ಪ್ರಜ್ಞಾ (26) ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಬೆಟ್ಟಂಪಾಡಿ ಮಿತ್ತಡ್ಕ ನಿವಾಸಿಯಾದ ಇವರು ಈಶ್ವರಮಂಗಲದಲ್ಲಿ ಸಮುದಾಯ ಆರೋಗ್ಯ ಅಧಿಕಾರಿಯಾಗಿ (CHO) ಕರ್ತವ್ಯ ನಿರ್ವಹಿಸುತ್ತಿದ್ದರು. ಕೆಲವು ದಿನಗಳ ಹಿಂದೆ ವಿಷ ಸೇವಿಸಿದ್ದ ಪ್ರಜ್ಞಾ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಇಂದು ಅವರು ಕೊನೆಯುಸಿರೆಳೆದಿದ್ದಾರೆ.

ಆತ್ಮಹತ್ಯೆಗೆ ನಿಖರ ಕಾರಣ ಇನ್ನು ತಿಳಿದುಬಂದಿಲ್ಲವಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Scroll to Top